ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಎಲ್ಲ ವಿದ್ಯಾರ್ಥಿಗಳೂ ಪಾಸ್

ಬೆಂಗಳೂರು: 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಈ ಬಾರಿ ಎಲ್ಲಾ ಪಿಯುಸಿ ವಿದ್ಯಾರ್ಥಿಗಳನ್ನು ಕೊರೊನಾ ಕಾರಣಕ್ಕಾಗಿ ಪಾಸ್​ ಮಾಡಲಾಗಿದೆ. ಸಂಜೆ 5 ರ ನಂತರ ವೆಬ್​ಸೈಟ್​ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಎಸ್​ಎಸ್​ಎಲ್ ಸಿ ಮತ್ತು ಪ್ರಥಮ ಪಿಯುಸಿ ಅಂಕಗಳನ್ನ ಪರಿಗಣನೆಗೆ ತೆಗೆದುಕೊಂಡು ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಇಲಾಖೆ ವೆಬ್​ಸೈಟ್ www.karresults.nic.in ​ ನಲ್ಲಿ ನೋಡಬಹುದಾಗಿದೆ.