ಗ್ರೇಡಿಂಗ್ ಆಧಾರದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುವುದು: ಶಿಕ್ಷಣ ಸಚಿವ ಸುರೇಶ್ ಕುಮಾರ್
ಬೆಂಗಳೂರು: ಕೋವಿಡ್ ವ್ಯಾಪಕವಾಗಿರುವ ಕಾರಣ ರಾಜ್ಯದಲ್ಲಿ ಈ ವರ್ಷ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದಿರಲು ತೀರ್ಮಾನಿಸಲಾಗಿದೆ. ಪ್ರಥಮ ಪಿಯುಸಿಯಲ್ಲಿ ತೆಗೆದುಕೊಂಡ ಅಂಕಗಳ ಆಧಾರದ ಮೇಲೆ ಗ್ರೇಡಿಂಗ್ ನೀಡಿ ಈ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ವಿದ್ಯಾರ್ಥಿಗಳಿಗೆ ಎ, ಎ+, ಬಿ, ಬಿ+ ಎಂಬಂತೆ ಗ್ರೇಡ್ ನೀಡಲಾಗುವುದು. ಯಾವುದೇ ವಿದ್ಯಾರ್ಥಿ ತನಗೆ ಸಿಕ್ಕ ಗ್ರೇಡ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರೆ, ತೃಪ್ತಿ ಇಲ್ಲ ಎಂದರೆ ಅಂತಹ ವಿದ್ಯಾರ್ಥಿಗಳಿಗೆ […]