ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಪರಿಶೀಲಿಸಿದ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್

ಉಡುಪಿ: ಜಿಲ್ಲೆಯ ಮತದಾರರ ಪಟ್ಟಿಯ ಪರಿಷ್ಕರಣಾ ಕಾರ್ಯದ ಅಂಗವಾಗಿ ಜಿಲ್ಲೆಗೆ ಭೇಟಿ ನೀಡಿದ ಜಿಲ್ಲಾ ಮತದಾರರ ಪಟ್ಟಿಯ ವೀಕ್ಷಕ ಹಾಗೂ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೋಮವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದರು. ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ 8122 ಮಂದಿ ಯುವ ಮತದಾರರನ್ನು ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಯುವ ಮತದಾರರ ಸೇರ್ಪಡೆ ಕಾರ್ಯವನ್ನು ಚುನಾವಣಾ ಆಯೋಗವು ವರ್ಷದಲ್ಲಿ ನಿಗದಿಪಡಿಸಿರುವ […]

ಅರ್ಹ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ: ಮನೋಜ್ ಜೈನ್

ಉಡುಪಿ: ಜಿಲ್ಲೆಯ ಮತದಾರರ ಪಟ್ಟಿಗೆ ಅರ್ಹ ಯುವ ಮತದಾರರ ಸೇರ್ಪಡೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆ ನೀಡಿದರು. ಅವರು ಮಂಗಳವಾರದಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯು ಭಾರತ ಚುನಾವಣಾ ಆಯೋಗದ ಸೂಚನೆಯನ್ವಯ ಕಳೆದ ನವೆಂಬರ್‌ನಿಂದ ಪ್ರಾರಂಭಿಸಲಾಗಿದ್ದು, ಈಗಾಗಲೇ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಈ ಬಗ್ಗೆ […]