ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಸ್ವ-ಉದ್ಯೋಗ ಆರಂಭಿಸಲು ಯುವಕ ಹಾಗೂ ಯುವತಿಯರಿಂದ ಅರ್ಜಿ ಆಹ್ವಾನ

ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಯಡಿ ಜಿಲ್ಲೆಯಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿ ಹೊಂದಿರುವ 18 ವರ್ಷ ಮೇಲ್ಪಟ್ಟ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಗರಿಷ್ಠ ಯೋಜನಾ ವೆಚ್ಚ ರೂ. 50.00 ಲಕ್ಷ ಮೊತ್ತದ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಗರಿಷ್ಠ ಯೋಜನಾ ವೆಚ್ಚ ರೂ. 20.00 ಲಕ್ಷ ಮೊತ್ತದ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸಲು ಅವಕಾಶವಿದ್ದು, […]

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಶಿಕ್ಷಣ ಹಾಗೂ ಸ್ವಯಂ ಉದ್ಯೋಗ ಸಾಲ ಸೌಲಭ್ಯ

ಉಡುಪಿ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ವೆಬ್‌ಸೈಟ್ kacdc.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 11 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 0820-2574882, ಮೊ.ನಂ: 9448451111 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ವ-ಉದ್ಯೋಗಕ್ಕಾಗಿ ಕಡಿಮೆ ಬಡ್ಡಿದರದ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ: ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಜಿಲ್ಲೆಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಬಡತನ ರೇಖೆಗಿಂತ ಕೆಳಗಿರುವ ನಿವಾಸಿಗಳು ಆರ್ಥಿಕ ಅಭಿವೃದ್ಧಿ ಸಾಧಿಸುವ ಸಲುವಾಗಿ ಸರಕಾರದ ದೀನದಯಾಳ್ ಅಂತ್ಯೋದಯ-ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳುವ ಕುರಿತು ಸ್ವ-ಸಹಾಯ ಗುಂಪುಗಳ ಬ್ಯಾಂಕ್ ಕ್ರೆಡಿಟ್ ಲಿಂಕೇಜ್ ಕಾರ್ಯಕ್ರಮದಡಿ ಕಡಿಮೆ ಬಡ್ಡಿ ದರದ ಸಾಲ ಸೌಲಭ್ಯ, ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (ಪಿ.ಎಂ.ಎಫ್.ಎಮ್.ಇ) ಕಾರ್ಯಕ್ರಮದಡಿ ಕಡಿಮೆ ಬಡ್ಡಿ […]