ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ಮೂವರ ಬಂಧನ
ಮಂಗಳೂರು: ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಎನ್ ಸಿಬಿ ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಸಂತೋಷ್ ಅಹಿರ್, ದಿಲೀಪ್ ನಾಗರಾವ್, ಇಮ್ರಾನ್ ಝಬೈರ್ ಬಂಧಿತ ಆರೋಪಿಗಳು. ಬಂಧಿತರಿಂದ 2.5 ಕಿ.ಗ್ರಾಂ ಗಾಂಜಾ, ಆಕ್ಟಿವಾ, ಮೂರು ಮೊಬೈಲ್ ಸಹಿತ ಒಟ್ಟು ₹ 1.17 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.