ಸೆಮಿಫೈನಲ್‌ನಲ್ಲಿ ಪಿ.ವಿ. ಸಿಂಧುಗೆ ಸೋಲು: ಚಿನ್ನದ ಪದಕ ಗೆಲ್ಲುವ ಕನಸು ಭಗ್ನ

ಟೋಕಿಯೊ: ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಪಿ.ವಿ. ಸಿಂಧು ಸೋಲು ಅನುಭವಿಸಿದ್ದಾರೆ. ಆ ಮೂಲಕ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆಲ್ಲುವ ಕನಸು ಭಗ್ನಗೊಂಡಿದೆ. ಇಂದು ನಡೆದ ಸೆಮಿಫೈನಲ್‌ ಮುಖಾಮುಖಿಯಲ್ಲಿ ಪಿ.ವಿ. ಸಿಂಧು, ಅಗ್ರಶ್ರೇಯಾಂಕದ ಆಟಗಾರ್ತಿ, ಥೈವಾನ್‌ನ ತೈ ಜು ಯಿಂಗ್ ವಿರುದ್ಧ 21-18, 21-12ರ ಅಂತರದಲ್ಲಿ ಸೋಲು ಅನುಭವಿಸಿದರು. ಇದರೊಂದಿಗೆ ಫೈನಲ್ ರೇಸ್‌ನಿಂದ ಹೊರಬಿದ್ದಿದ್ದಾರೆ. 2016ರ ರಿಯೊ ಒಲಿಂಪಿಕ್ಸ್‌ನ ಬೆಳ್ಳಿ ಪದಕ ಗೆದ್ದಿರುವ ಸಿಂಧು, ಈಗ ಕಂಚಿನ ಪದಕಕ್ಕಾಗಿ ಹೋರಾಡಲಿದ್ದಾರೆ.