ಹಿರಿಯ ನಟ ಶಿವರಾಂ ಸ್ಥಿತಿ ಗಂಭೀರ; ಐಸಿಯುಗೆ ದಾಖಲು
ಬೆಂಗಳೂರು: ಮೆದುಳಿನಲ್ಲಿ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಹಿರಿಯ ನಟ ಶಿವರಾಂ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಹೊಸಕರೆ ಹಳ್ಳಿಗೆ ಕಾರಿನಲ್ಲಿ ಅವರು ಹೋಗಿದ್ದ ವೇಳೆ ಅವರು ಕಾರಿನಿಂದ ಬಿದ್ದಿದ್ದರು. ಇದರಿಂದ ತಲೆಗೆ ತೀವ್ರವಾದ ಪೆಟ್ಟು ಬಿದ್ದಿದೆ ಎಂದು ಹೇಳಲಾಗಿದೆ. 84 ವರ್ಷದ ಹಿರಿಯ ನಟ ಶಿವರಾಮ್ ಅವರನ್ನು ವಿದ್ಯಾಪೀಠ ಸರ್ಕಲ್ ಬಳಿಯ ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಲಾಗಿದೆ.