ಅಂಬಲಪಾಡಿ: ಹಿರಿಯ ನಾಗರಿಕರನ್ನು ರಂಜಿಸಿದ ಜಾನಪದ ವೈಭವ ಕಾರ್ಯಕ್ರಮ 

ಉಡುಪಿ : ತಲ್ಲೂರು ಫ್ಯಾಮಿಲಿ ಟ್ರಸ್ಟ್, ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ಹಿರಿಯ ನಾಗರಿಕರ ಸಂಸ್ಥೆಯ ಸಹಕಾರದಲ್ಲಿ ಅಂಬಲಪಾಡಿ ದೇವಳದ ಭವಾನಿ ಮಂಟಪದಲ್ಲಿ ಶನಿವಾರ ನಡೆದ `ಜಾನಪದ ವೈಭವ ‘ ಕಾರ್ಯಕ್ರಮ ಹಿರಿಯ ನಾಗರಿಕರನ್ನು ರಂಜಿಸಿತು. ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಡುಪಿಯ `ಕಲಾಮಯಂ ‘ ಸಾಂಸ್ಕೃತಿಕ ತಂಡ ವೈವಿಧ್ಯಮಯ ಜಾನಪದ ನೃತ್ಯಗಳನ್ನು ಪ್ರದರ್ಶಿಸುವ ಮೂಲಕ ಜಾನಪದ ಲೋಕವನ್ನೇ […]