ಕೊಡವೂರು: ಹಿರಿಯ ನಾಗರಿಕರ ಉಚಿತ ನೇತ್ರ ತಪಾಸಣಾ ಶಿಬಿರ ಸಂಪನ್ನ

ಕೊಡವೂರು: ವಾರ್ಡಿನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ ಇವರ ಸಹಯೋಗದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತವಾಗಿ ನೇತ್ರ ತಪಾಸಣಾ ಶಿಬಿರ ನಡೆಯಿತು. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಒಟ್ಟು 26 ಜನರು ಕಣ್ಣಿನ ಪರೀಕ್ಷೆಯನ್ನು ನಡೆಸಿ, 13 ಜನರಿಗೆ ಶಸ್ತ್ರ ಚಿಕಿತ್ಸೆ ಹಾಗೂ 7 ಜನರಿಗೆ ಕನ್ನಡಕ ವಿತರಣೆಯನ್ನು ಮಾಡಲಾಯಿತು. ನಗರಸಭಾ ಸದಸ್ಯ ವಿಜಯ್ ಕೊಡವೂರು ಮಾತನಾಡಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ ವತಿಯಿಂದ ಉಚಿತವಾಗಿ ನೇತ್ರ ತಪಾಸಣಾ ಶಿಬಿರವನ್ನು ಕೊಡವೂರು […]

ಮನೆಯಿಂದಲೇ ಮತದಾನಕ್ಕೆ ಒಲ್ಲೆ ಎಂದರು: ಮತಗಟ್ಟೆಗೆ ಬರಲು ಉತ್ಸಾಹ ತೋರುತ್ತಿದ್ದಾರೆ ಹಿರಿಯನಾಗರಿಕರು/ವಿಕಲಚೇತನರು

ಉಡುಪಿ: ರಾಜ್ಯದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಚುನಾವಣಾ ಆಯೋಗವು ವಿಕಲಚೇತನರಿಗೆ ಮತ್ತು 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತ ಚಲಾಯಿಸಲು ವಿಶೇಷ ಸೌಲಭ್ಯ ಒದಗಿಸಿದೆ. ಆದರೆ ಜಿಲ್ಲೆಯ ಬಹುತೇಕ ವಿಕಲಚೇತನರು ಮತ್ತು ಹಿರಿಯ ನಾಗರೀಕರು ಮನೆಯಿಂದಲೇ ಮತದಾನ ಮಾಡುವ ಸೌಲಭ್ಯವನ್ನು ಬಳಸಿಕೊಳ್ಳದೇ, ಮತದಾನದ ದಿನದಂದು ಮತಗಟ್ಟೆಗೆ ಖುದ್ದು ತೆರಳಿ ತಮ್ಮ ಮತದಾನದ ಹಕ್ಕು ಚಲಾಯಿಸಲು ಉತ್ಸಾಹ ತೋರಿದ್ದಾರೆ. ಜಿಲ್ಲೆಯಲ್ಲಿ 80 ವರ್ಷ ಮೇಲ್ಪಟ್ಟ, ಬೈಂದೂರು ವಿಧಾನಸಭಾ ಕ್ಷೇತ್ರದ 5864 ಹಿರಿಯ […]

ಹಿರಿಯ ನಾಗರಿಕರ ಸೌಲಭ್ಯಗಳ ಕುರಿತು ಮಾಹಿತಿ ಕಾರ್ಯಕ್ರಮ

ಉಡುಪಿ: ವೃದ್ಧಾಪ್ಯವು ಪ್ರಕೃತಿ ಸಹಜ ಪ್ರಕ್ರಿಯೆಯಾಗಿದ್ದು, ಹಿರಿಯ ನಾಗರಿಕರನ್ನು ಕಡೆಗಣಿಸದೇ ಅವರ ಸಂಧ್ಯಾ ಕಾಲದಲ್ಲಿ ಹೊಂದಾಣಿಕೆಯ ಜೀವನ ನಡೆಸುವುದು ಅತ್ಯವಶ್ಯಕವಾಗಿದೆ ಎಂದು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಯೋಜನಾ ಸಂಯೋಜಕಿ ಅಶ್ವಿನಿ ಹೇಳಿದರು. ಅವರು ಇತ್ತೀಚೆಗೆ ಬಡಾನಿಡಿಯೂರು ಗ್ರಾಮ ಪಂಚಾಯತ್‌ನಲ್ಲಿ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಇವರ ವತಿಯಿಂದ ನಡೆದ ಅರಿವಿನ ಸಿಂಚನ ಕಾರ್ಯಕ್ರಮದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರಿಗೆ ಸರಕಾರದಿಂದ ದೊರಕುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿ, ಮಾತನಾಡಿದರು. ಹಿರಿಯ […]