ಹಿರಿಯ ಕಾಂಗ್ರೆಸ್ ಮುಖಂಡ ಹಾಜಿ ಕೆ. ಆತ್ರಾಡಿ ಇದಿನಬ್ಬ ವಿಧಿವಶ
ಉಡುಪಿ: ಹಿರಿಯ ಕಾಂಗ್ರೆಸ್ ಮುಖಂಡ ಹಾಜಿ ಕೆ.ಆತ್ರಾಡಿ ಇದಿನಬ್ಬ(72) ಅಲ್ಪಕಾಲದ ಅಸೌಖ್ಯದಿಂದ ಇಂದು ನಸುಕಿನ ವೇಳೆ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಉಡುಪಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದವರಲ್ಲಿ ಇವರು ಒಬ್ಬರು. ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿ, ಉಡುಪಿ ತಾಲೂಕು ಆಶ್ರಯ ಸಮಿತಿಯ ಸದಸ್ಯರಾಗಿ ಹಾಗೂ ಆತ್ರಾಡಿ ಜುಮ್ಮಾ ಮಸೀದಿಯ ಉಪಾಧ್ಯಕ್ಷರಾಗಿ ಇವರು ಸೇವೆ ಸಲ್ಲಿಸಿದ್ದರು. ಇವರು ಪತ್ನಿ ಇಬ್ಬರು ಪುತ್ರರು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. […]