ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ‌ ಚಿಕಿತ್ಸೆ ಮುಂದುವರಿಕೆ

ಮಂಗಳೂರು: ಹಿರಿಯ ಕಾಂಗ್ರೆಸ್‍ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಹಿರಿಯ ಕಾಂಗ್ರೆಸ್‍ ಮುಖಂಡ ಜನಾರ್ಧನ ಪೂಜಾರಿ, ಹಿರಿಯ ನಾಯಕರಾದ ಎಚ್.ಕೆ. ಪಾಟೀಲ್, ಎಂ.ಬಿ ಪಾಟೀಲ್, ಯು.ಟಿ. ಖಾದರ್, ಪ್ರಮೋದ್ ಮಧ್ವರಾಜ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಆಸ್ಕರ್ ಅವರ ಆರೋಗ್ಯ ವಿಚಾರಿಸಿದ್ದಾರೆ.