ಹಿರಿಯ ನಿರ್ದೇಶಕ ಕೆವಿ ರಾಜು ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆವಿ ರಾಜು ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ. ಅನಾರೋಗ್ಯದ ಕಾರಣ ಕೆಲವು ದಿನಗಳಿಂದ ಮನೆಯಲ್ಲಿಯೇ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ರಾಜಾಜಿನಗರದ ನಿವಾಸದಲ್ಲಿ ಬೆಳಗ್ಗೆ 8 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ. ಕೆವಿ ರಾಜು ಅವರು ಚಿತ್ರರಂಗದಲ್ಲಿ ನಿರ್ದೇಶಕ, ಬರಹಗಾರ ಮತ್ತು ಚಿತ್ರಕಥೆಗಾರರಾಗಿ ಗುರುತಿಸಿಕೊಂಡಿದ್ದರು. ಖ್ಯಾತ ನಿರ್ದೇಶಕ ಕೆವಿ ಜಯರಾಮ್ ಅವರ ಸಹೋದರರಾಗಿದ್ದ ಕೆವಿ ರಾಜು, 1982 ರಲ್ಲಿ ‘ಬಾಡದ ಹೂ’ ಚಿತ್ರದಲ್ಲಿ ತಮ್ಮ ಸಹೋದರನಿಗೆ ಸಹಾಯಕ ನಿರ್ದೇಶಕರಾಗುವ […]