ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ತಿಪಟೂರು ರಘು ನಿಧನ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ತಿಪಟೂರು ರಘು (83) ಅವರು ವಯೋಸಹಜ ಕಾಯಿಲೆಯಿಂದ ಶನಿವಾರ ಬೆಳಿಗ್ಗೆ ನಿಧನ ಹೊಂದಿದರು. ಅವರು ಮೂರು ವರ್ಷದ ಹಿಂದೆ ಪಾರ್ಶ್ವವಾಯುಗೆ ಒಳಗಾಗಿದ್ದರು. ಹೀಗಾಗಿ ಕೆಲ ತಿಂಗಳ ಹಿಂದೆ ಆಸ್ಪತ್ರೆಯಲ್ಲಿದ್ದುಕೊಂಡೇ ಚಿಕಿತ್ಸೆ ಪಡೆದಿದ್ದರು. ಬಳಿಕ ಅನಾರೋಗ್ಯದಿಂದ ಗುಣಮುಖರಾಗಿ ಇತ್ತೀಚೆಗೆ ಮನೆಗೆ ಮರಳಿದ್ದರು. ಆದರೆ ಉಸಿರಾಟದ ಸಮಸ್ಯೆ ಮತ್ತೆ ಕಾಣಿಸಿಕೊಂಡಿತು. ಶನಿವಾರ ಮುಂಜಾನೆ 4.45ರ ವೇಳೆಗೆ ಅವರು ಮೃತಪಟ್ಟರು ಎಂದು ತಿಳಿದುಬಂದಿದೆ. ನಾಗಪೂಜಾ ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದ ರಘು […]