ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನಿಧನ

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ(103) ಅವರು ಇಂದು ಹೃದಯಾಘಾತದಿಂದ ನಿಧನ ಹೊಂದಿದರು. ಇತ್ತೀಚೆಗಷ್ಟೇ ಕೋವಿಡ್ ನಿಂದ ಗುಣಮುಖರಾಗಿದ್ದ ದೊರೆಸ್ವಾಮಿ, ಉಸಿರಾಟದ ಸಮಸ್ಯೆಯಿಂದ ಮತ್ತೆ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಹೃದಯಾಘಾತದಿಂದ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.