ಮಾಜಿ ಕೇಂದ್ರ ಸಚಿವ ರಘುವಂಶ್ ಪ್ರಸಾದ್ ಸಿಂಗ್ ನಿಧನ
ನವದೆಹಲಿ: ಮಾಜಿ ಕೇಂದ್ರ ಸಚಿವ, ಆರ್ ಜೆಡಿ ಪಕ್ಷದ ಹಿರಿಯ ನಾಯಕರಾಗಿದ್ದ ರಘುವಂಶ್ ಪ್ರಸಾದ್ ಸಿಂಗ್ ಅವರು ಭಾನುವಾರ ಬೆಳಿಗ್ಗೆ ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಕಳೆದ ನಾಲ್ಕು ದಿನಗಳಿಂದ ಆರೋಗ್ಯ ಮತ್ತಷ್ಟು ಬಿಗಡಾಯಿಸಿದ್ದು, ರಘುವಂಶ್ ಪ್ರಸಾದ್ ಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಕಾರಿಯಾಗದೆ ಇಂದು ಅವರು ಮೃತಪಟ್ಟಿದ್ದಾರೆ. ರಘುವಂಶ್ ಪ್ರಸಾದ್ […]