ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟಿ ಬಿ. ಜಯಾ ನಿಧನ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟಿ ಬಿ.ಜಯಾ (77) ಅವರು ವಯೋಸಹಜ ಅನಾರೋಗ್ಯದಿಂದಾಗಿ ಗುರುವಾರ ನಿಧನ ಹೊಂದಿದರು. ತಿಂಗಳ ಹಿಂದೆ ಪಾರ್ಶ್ವವಾಯುಗೆ ತುತ್ತಾಗಿದ್ದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ. 1958ರಲ್ಲಿ ‘ಭಕ್ತ ಪ್ರಹ್ಲಾದ’ ಸಿನಿಮಾ ಮುಖಾಂತರ ಕನ್ನಡ ಚಿತ್ರರಂಗಕ್ಕೆ ಕಾಲಿರಿಸಿದ್ದ ಜಯಾ ಅವರು, ಸುಮಾರು ಆರು ದಶಕಗಳ ಕಾಲ ಚಿತ್ರರಂಗದಲ್ಲಿ 350ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಲ್ಲದೆ, ರಂಗಭೂಮಿ, ಕಿರುತೆರೆಯಲ್ಲೂ ಹಲವು ಪಾತ್ರಗಳನ್ನು ನಿಭಾಯಿಸಿದ್ದರು. ಹಾಸ್ಯನಟಿಯಾಗಿ ಹೆಚ್ಚು ಖ್ಯಾತಿ […]