ಹಿರಿಯ ರಂಗಕರ್ಮಿ ಪ್ರೊ. ಉದ್ಯಾವರ ಮಾಧವ ಆಚಾರ್ಯ ಇನ್ನಿಲ್ಲ
ಉಡುಪಿ: ಹಿರಿಯ ರಂಗಕರ್ಮಿ ಪ್ರೊ. ಉದ್ಯಾವರ ಮಾಧವ ಆಚಾರ್ಯ (80) ಅವರು ಅನಾರೋಗ್ಯದಿಂದ ಇಂದು ಮಧ್ಯಾಹ್ನ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕಳೆದ ಎರಡ್ಮೂರು ವರ್ಷದಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಇಂದು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಉಡುಪಿ ಪಿಪಿಸಿ ಕಾಲೇಜಿನಲ್ಲಿ ಸುದೀರ್ಘ ಅವಧಿಗೆ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾಗಿ, ವಿಭಾಗ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಆ ಬಳಿಕ ಕುಂದಾಪುರದ ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ್ದರು. […]