NEP ಗೆ ತಿಲಾಂಜಲಿ: ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ಸಂಘದಿಂದ ವಿರೋಧ
ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ತೆಗೆದುಹಾಕುವುದಾಗಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಹೇಳಿದ್ದಾರೆ. ಈ ಘೋಷಣೆಗೆ ಪ್ರತಿಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಿದ್ದು, ಇದೀಗ ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ಸಂಘದಿಂದ ವಿರೋಧ ವ್ಯಕ್ತವಾಗಿದೆ. ಸರಕಾರ ಈ ನೀತಿಯನ್ನು ಕೈಬಿಡುವ ಬದಲು ಬದಲಾವಣೆ ಮಾಡಬೇಕು ಎಂದು ಸಂಘ ಒತ್ತಾಯಿಸಿದೆ. ಖಾಸಗಿ ಶಾಲೆಗಳ ಸಂಘದ ಪ್ರಕಾರ, ಇದು ವಿದ್ಯಾರ್ಥಿಗಳ ದೃಷ್ಠಿಯಿಂದ ‘ಆರೋಗ್ಯಕರ ಬೆಳವಣಿಗೆಯಲ್ಲ’ ಮತ್ತು ಸರ್ಕಾರವು ಈಗಾಗಲೇ ಜಾರಿಗೆ ಬಂದಿರುವಂತೆ ಎನ್‌ಇಪಿಯನ್ನು ಮುಂದುವರಿಸಬೇಕು […]