ಈ ತಿಂಗಳ ಕೊನೆಯಲ್ಲಿ 3 ಸಿನಿಮಾಗಳು ತೆರೆಗೆ

ಸೆಪ್ಟೆಂಬರ್​ 28ರಂದು ಬಹುನಿರೀಕ್ಷಿತ ಮೂರು ಸಿನಿಮಾಗಳು ಬಿಡುಗಡೆಯಾಗಲಿವೆ.ಭಾರತೀಯ ಚಿತ್ರರಂಗದಲ್ಲಿ ಇತ್ತೀಚೆಗಿನ ಕೆಲವು ವರ್ಷಗಳಲ್ಲಿ ಅತ್ಯುತ್ತಮ ಸಿನಿಮಾಗಳು ತೆರೆ ಕಾಣುತ್ತಿವೆ. ಕಾಂತಾರ, ಕೆಜಿಎಫ್​, ಪಠಾಣ್​, ಜೈಲರ್​ ಹೀಗೆ ಸಾಕಷ್ಟು ಸಿನಿಮಾಗಳು ಪ್ರೇಕ್ಷಕರ ಮನರಂಜಿಸುವಲ್ಲಿ ಯಶಸ್ವಿಯಾಗಿವೆಬಾಕ್ಸ್​ ಆಫೀಸ್​ ಕೊಳ್ಳೆ ಹೊಡೆಯುವಲ್ಲಿಯೂ ಸಫಲವಾಗಿವೆ. ವಿಶ್ವಾದ್ಯಂತ ಭಾರತದ ಸಿನಿಮಾಗಳು ತಿಂಗಳುಗಟ್ಟಲೆ ಪ್ರದರ್ಶನ ಕಾಣುತ್ತಿವೆ. ಶಾರುಖ್​ ಖಾನ್​ ನಟನೆಯ ‘ಜವಾನ್​’ ಸಿನಿಮಾ ಇದೀಗ ಎಲ್ಲೆಡೆ ಧೂಳೆಬ್ಬಿಸುತ್ತಿದೆ. ಈ ನಡುವೆ ಇದೇ ತಿಂಗಳು ಮತ್ತೆ ಮೂರು ಸಿನಿಮಾಗಳು ಒಂದೇ ದಿನ ಸಿಲ್ವರ್ ಸ್ಟ್ಕೀನ್‌ನಲ್ಲಿ ಮಿಂಚಲು ಸಜ್ಜಾಗಿವೆ. […]