ಪಾಕ್ ಗೆ ಬಿಗ್ ಶಾಕ್: ಉಗ್ರರ ಅಡ್ಡಾ ಚೆಲ್ಲಾಡಿದ ಭಾರತ, ಉಗ್ರರನ್ನು ಮಟಾಶ್ ಮಾಡಿತು ಸೇನೆ

ನವದೆಹಲಿ: ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ)  ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಮಂಗಳವಾರ ಮುಂಜಾವಿನ ವೇಳೆ  ಧ್ವಂಸಗೊಳಿಸಿದೆ. ಗಡಿ ಪ್ರದೇಶದಲ್ಲಿ ಬೀಡುಬಿಟ್ಟಿದ್ದ ಜೈಷ್-ಎ-ಮೊಹಮ್ಮದ್ ಸಂಘಟನೆಯ ಉಗ್ರರ ನೆಲೆಯ ಮೇಲೆ ಬರೋಬ್ಬರಿ ಸಾವಿರ ಕೆಜಿಯ ಬಾಂಬ್ ಹಾಕಲಾಗಿದೆ ಎನ್ನಲಾಗಿದೆ.ಅಲ್ಲಿದ್ದ ಉಗ್ರರ ಸಂಘಟನೆಯ ಕ್ಯಾಂಪ್ ಸಂಪೂರ್ಣ ಧ್ವಂಸವಾಗಿದ್ದು, ಪುಲ್ವಾಮಾ ದಾಳಿಗೆ ದಿಟ್ಟ ಪ್ರತೀಕಾರವನ್ನು ಭಾರತ ತೆಗೆದುಕೊಂಡಿದ್ದು, ಈ ಬಗ್ಗೆ ಅಧಿಕೃತ ಮಾಹಿತಿ ಹೊರಬರಬೇಕಿದೆ.