ಕೋವಿಡ್ ಸಮಯದಲ್ಲಿ ಕರ್ತವ್ಯ ನಿರ್ವಹಿಸಿದ ಆರೋಗ್ಯ ಸಿಬ್ಬಂದಿಗಳ ಸೇವೆ ಅವಿಸ್ಮರಣೀಯ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಕೋವಿಡ್ ಸಂದರ್ಭದಲ್ಲಿ ಇಡೀ ದೇಶವೇ ಕಷ್ಟದಲ್ಲಿರುವಾಗ ತಮ್ಮ ಜೀವ ಪಣಕ್ಕಿಟ್ಟು, ಕರ್ತವ್ಯ ನಿರ್ವಹಿಸಿದ ಮಹತ್ತರವಾದ ಪಾತ್ರ ಆರೋಗ್ಯ ಸಿಬ್ಬಂದಿ ಮತ್ತು ನೌಕರದ್ದಾಗಿದೆ. ಈ ನಿಟ್ಟಿನಲ್ಲಿ ಅವರಿಗೆ ಪ್ರೋತ್ಸಾಹ ನೀಡುವುದು ಒಂದು ಅತ್ಯುತ್ತಮ ಕೆಲಸವಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಭಿಪ್ರಾಯಪಟ್ಟರು. ಅವರು ಇಂದು ನಗರದ ಅಂಬಲಪಾಡಿಯ ಶ್ಯಾಮಿಲಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕೋವಿಡ್ ವಾರಿಯರ್ಸ್ ರವರಿಗೆ ಅಭಿನಂದನಾ […]