ಕೇಂದ್ರ ಸರ್ಕಾರಕ್ಕೆ ಹಿನ್ನಡೆ: ಮೂರು ಕೃಷಿ ಕಾಯ್ದೆಗಳಿಗೆ ಸುಪ್ರೀಂ ಕೋರ್ಟ್ ನಿಂದ ತಡೆ

ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದ್ದು, ಸಮಸ್ಯೆಯ ಬಗೆಹರಿಸಲು ಸಮಿತಿಯೊಂದನ್ನು ರಚಿಸಿ ಮಂಗಳವಾರ ಆದೇಶ ನೀಡಿದೆ. ಈ ಮೂಲಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ 48 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಕೃಷಿ ಮಸೂದೆ ಕುರಿತು ಸಲ್ಲಿಕೆಯಾಗಿರುವ ವಿವಿಧ ಅರ್ಜಿಗಳ ಕುರಿತು ವಿಚಾರಣೆ ನಡೆಸಿರುವ ಕೋರ್ಟ್, ಯಾವುದೇ ಶಕ್ತಿಗೂ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಈಗಿರುವ ಸಮಸ್ಯೆಯನ್ನು ನಾವು ಇತ್ಯರ್ಥಪಡಿಸಲೇಬೇಕಾಗಿದೆ. ಅದ್ದರಿಂದ ನಾವು ಸಮಿತಿಯೊಂದನ್ನು […]