ಕಾಲಮಿತಿಯೊಳಗೆ ಸಮಸ್ಯೆಗಳ ಇತ್ಯರ್ಥ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ಗಂಭೀರವಲ್ಲದ ದೂರುಗಳನ್ನು ಸ್ಥಳದಲ್ಲೇ ಪರಿಹರಿಸಲಾಗುವುದು. ಗಂಭೀರ ದೂರುಗಳನ್ನು ನಿರ್ದಿಷ್ಟ ಕಾಲಮಿತಿಯೊಳಗೆ ಇತ್ಯರ್ಥಪಡಿಸಲಾಗುವುದು. ಈ ಕುರಿತಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಮುದರಂಗಡಿಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿರಿಯ ನಾಗರೀಕರು, ವಿಕಲಚೇತನರಿಗೆ ಸಂಬಂಧಪಟ್ಟ ದೂರುಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಲಾಗುವುದು ಹಾಗೂ ಕಾರ್ಯಕ್ರಮದಲ್ಲಿ ಸಲ್ಲಿಕೆಯಾಗುವ ಎಲ್ಲಾ ದೂರುಗಳನ್ನು ಬಗೆಹರಿಸಲಾಗುವುದು ಎಂದ ಜಿಲ್ಲಾಧಿಕಾರಿಗಳು, […]