ಏಳನೇ ತರಗತಿ ಬಾಲಕ ಹೃದಯಾಘಾತಕ್ಕೆ ಬಲಿ

ಚಿಕ್ಕಮಗಳೂರು: ಏಳನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಆತಂಕಕಾರಿ ಘಟನೆಯೊಂದು ಚಿಕ್ಕಮಗಳೂರಿನ ಎನ್.ಆರ್.ಪುರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತ ಬಾಲಕನನ್ನು ಎನ್.ಆರ್. ಪುರ ನಿವಾಸಿ ಸೋಹನ್ ರಾಮ್ (12) ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಸೈಕಲ್ ಓಡಿಸುತ್ತಿದ್ದ ಸಂದರ್ಭದಲ್ಲಿ ಸೋಹನ್ ಏಕಾಏಕಿ ಕುಸಿದುಬಿದ್ದಿದ್ದು, ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆಯೇ ಬಾಲಕ ಉಸಿರು ಚೆಲ್ಲಿದ್ದಾನೆ. ಬಾಲಕನ ಹೃದಯಾಘಾತದಿಂದ ಮೃತನಾಗಿದ್ದಾನೆಂದು ವೈದ್ಯರು ತಿಳಿಸಿದ್ದಾರೆ.