ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಖ್ಯಾತ ವಕೀಲನ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಇಂಟರ್ನ್‌ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರಿನ ಖ್ಯಾತ ವಕೀಲ K.S.N.ರಾಜೇಶ್ ಭಟ್ ವಿರುದ್ಧ ಕೇಸ್ ದಾಖಲಾಗಿದೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಎಲ್ಎಲ್‌ಬಿ ವಿದ್ಯಾರ್ಥಿನಿ ದೂರು ಆಧರಿಸಿ ನಿನ್ನೆ ರಾತ್ರಿ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿಯು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ವಕೀಲರ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ಬಯಲಾಗುತ್ತಿದ್ದಂತೆ ವಕೀಲ ರಾಜೇಶ್ ಭಟ್ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಮಂಗಳೂರು ಎಸಿಬಿ, ಲೋಕಾಯುಕ್ತಕ್ಕೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿರುವ ರಾಜೇಶ್ ಭಟ್, […]