ಶಬರಿಮಲೆ ಸನ್ನಿದಾನದಲ್ಲೇ ಅಯ್ಯಪ್ಪ ಭಕ್ತ ಆತ್ಮಹತ್ಯೆಗೆ ಶರಣು..!

ಅಯ್ಯಪ್ಪ ಭಕ್ತರೊಬ್ಬರು ಶಬರಿಮಲೆ ದೇಗುಲದ ಸ್ಕೈವಾಕ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಭಕ್ತ ಕನಕಪುರದ ಮದ್ದೂರಮ್ಮ ಬೀದಿ ನಿವಾಸಿ ಕುಮಾರ್ (40) ಎಂದು ಗುರುತಿಸಲಾಗಿದೆ. ಮೃತ ಕುಮಾರ್ ಗಾರೆ ಕೆಲಸ ಮಾಡಿಕೊಂಡಿದ್ದರು. ಮೂರು ದಿನದ ಹಿಂದೆ ಕುಮಾರ್ ಸೇರಿ 6 ಮಂದಿ ಶಬರಿಮಲೆಗೆ ತೆರಳಿದ್ದರು. ಅಯ್ಯಪ್ಪನ ದರ್ಶನ ಪಡೆದ ಬಳಿಕ ದೇವಾಲಯದ ಸ್ಕೈವಾಕ್ ಶೆಲ್ಟರ್ ಮೇಲಿನಿಂದ ಜಿಗಿದು ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.ದೇವಾಲಯದ ಮೇಲಿಂದ ಜಿಗಿಯುವ ದೃಶ್ಯ ಭಕ್ತರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಘಟನೆಯಲ್ಲಿ […]