ಶಬರಿಮಲೆಗೆ ಮಹಿಳಾ ಪ್ರವೇಶ ವಿರೋಧಿಸಿ ಮೌನ ಮೆರವಣಿಗೆ
ಉಡುಪಿ: ಶಬರಿಮಲೆಗೆ ಮಹಿಳಾ ಪ್ರವೇಶವನ್ನು ವಿರೋಧಿಸಿ ಶ್ರೀರಾಮ ಸೇನೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಣಿಪಾಲದ ಉಪೇಂದ್ರ ಪೈ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಶನಿವಾರ ಮೌನ ಮೆರವಣಿಗೆ ನಡೆಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ಕೇರಳದ ಶಬರಿಮಲೆ ದೇಗುಲ ತನ್ನದೇ ಆದ ಸಂಪ್ರದಾಯವನ್ನು ಆಚರಿಸಿಕೊಂಡು ಬಂದಿದೆ. ಅದಕ್ಕೆ ಕಾನೂನಿನ ಮೂಲಕ ತಡೆಯೊಡ್ಡುವುದು ಸರಿಯಲ್ಲ. ಆದ್ದರಿಂದ ಕೇಂದ್ರ ಸರಕಾರ ಸುಗ್ರಿವಾಜ್ಞೆ ಹೊರಡಿಸಿ, ಸುಪ್ರೀಂ ಕೋರ್ಟ್ ನ ಆದೇಶಕ್ಕೆ ತಡೆಯಾಜ್ಞೆ ನೀಡಬೇಕೆಂದು ಜಿಲ್ಲಾಧ್ಯಕ್ಷ ಜಯರಾಮ್ ಅಂಬೆಕಲ್ಲು ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿ ವಿದ್ಯಾಕುಮಾರಿ […]
ಹಿಂದೂ ಧರ್ಮದ ಸಂಪ್ರದಾಯಗಳನ್ನು ಬದಲಾವಣೆ ಮಾಡುವ ಅಧಿಕಾರ ಯಾವುದೇ ಸರಕಾರಕ್ಕೂ ಇಲ್ಲ: ಪೇಜಾವರ ಶ್ರೀ
ಉಡುಪಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳದ ಕಮ್ಯೂನಿಸ್ಟ್ ಸರಕಾರ ನ್ಯಾಯಾಲಯದ ತೀರ್ಮಾನವನ್ನು ಇಟ್ಟುಕೊಂಡು, ಹಠಮಾರಿ ಧೋರಣೆ ತೋರುತ್ತಿರುವುದು ಸರಿಯಲ್ಲ. ಬಹುಸಂಖ್ಯಾತ ಹಿಂದೂಗಳ ಅಭಿಪ್ರಾಯಕ್ಕೆ ಮನ್ನಣೆ ನೀಡಿ, ತಲತಲಾಂತರದಿಂದ ಶಬರಿಮಲೆಯಲ್ಲಿ ಆಚರಿಸಿಕೊಂಡು ಬರುತ್ತಿರುವ ಸಂಪ್ರದಾಯವನ್ನು ಮುಂದುವರಿಸಲು ಅವಕಾಶ ನೀಡಬೇಕು ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು. ಶುಕ್ರವಾರ ಪೇಜಾವರ ಮಠದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರ್ಮಿಕ ವಿಚಾರಗಳಲ್ಲಿ ನ್ಯಾಯಾಲಯ ಅಥವಾ ಸರಕಾರ ತೀರ್ಮಾನ ಕೈಗೊಳ್ಳುವುದು ಸರಿಯಲ್ಲ. ಈ ವಿಚಾರದಲ್ಲಿ ಜನರ ಭಾವನೆಗೆ ಬೆಲೆ ಕೊಡಬೇಕು. ಹಿಂದೂ ಧರ್ಮದ ಸಂಪ್ರದಾಯಗಳನ್ನು […]
ಶಬರಿಮಲೆಗೆ ಮಹಿಳಾ ಪ್ರವೇಶ ಖಂಡಿಸಿ ಪ್ರತಿಭಟನೆ
ಕಾರ್ಕಳ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶವನ್ನು ಖಂಡಿಸಿ ಕಾರ್ಕಳದಲ್ಲಿ ಮೊಂಬತ್ತಿ ಹಿಡಿದು ಮೆರವಣಿಗೆಯ ಮೂಲಕ ವಿಭಿನ್ನವಾಗಿ ಪ್ರತಿಭಟಿ ಸಲಾಯಿತು. ವಿಶ್ವ ಹಿಂದೂ ಪರಿಷತ್ ಕಾರ್ಕಳ, ಬಜರಂಗ ದಳ, ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಮಂದಿ ಭಾಗವಹಿಸಿದ್ದರು. ನಗರದ ಅನಂತಶಯನದಿಂದ ಮುಖ್ಯರಸ್ತೆಯ ಮೂಲಕ ವೆಂಕಟರಮಣ ದೇವಸ್ಥಾನದವರೆಗೆ ಮೊಂಬತ್ತಿ ಹಿಡಿದು ಮೆರವಣಿಗೆ ಸಾಗಿತು. ಬಜರಂಗ ದಳ ರಾಜ್ಯ ಸಂಚಾಲಕ ಸುನಿಲ್ ಕೆ.ಆರ್., ಪ್ರಮುಖರಾದ ಮಹೇಶ್ ಬೈಲೂರು, ಗುರುಪ್ರಸಾದ್, ರತ್ನಾಕರ ಅಮೀನ್ ಸೇರಿದಂತೆ ನೂರಾರು ಮಂದಿ […]
ಶಬರಿಮಲೆ ದೇಗುಲಕ್ಕೆ ಮಹಿಳಾ ಪ್ರವೇಶ ವಿರೋಧಿಸಿ ಪ್ರತಿಭಟನೆ
ಉಡುಪಿ: ಶಬರಿಮಲೆ ದೇಗುಲಕ್ಕೆ ಇಬ್ಬರು ಮಹಿಳೆಯರನ್ನು ಪ್ರವೇಶಿಸಲು ಸಹಕರಿಸಿ ಹಿಂದು ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದ ಕೇರಳ ರಾಜ್ಯ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಶಬರಿಮಲೆ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ಬಿಜೆಪಿ, ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಅಯ್ಯಪ್ಪ ಸ್ವಾಮಿ ಭಕ್ತಾದಿಗಳು ನಗರದ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಬಳಿ ಗುರುವಾರ ಪ್ರತಿಭಟನೆ ನಡೆಸಿದರು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅಯ್ಯಪ್ಪ ಭಕ್ತಾದಿಗಳು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಕೇರಳ ಸರಕಾರ ಇಬ್ಬರು ಮಹಿಳೆಯರಿಗೆ ಶಬರಿಮಲೆ ದೇಗುಲಕ್ಕೆ ಪ್ರವೇಶಿಸಲು ಅವಕಾಶಕೊಟ್ಟಿರುವುದನ್ನು […]
ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರ, ಧಾರ್ಮಿಕ ಸಂವಿಧಾನ ಮುರಿಯುವುದು ಸರಿಯಲ್ಲ: ಪಲಿಮಾರು ಶ್ರೀ
ಉಡುಪಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಚಾರದಲ್ಲಿ ಧಾರ್ಮಿಕ ಸಂವಿಧಾನವನ್ನು ಮುರಿಯುವುದು ಸರಿಯಲ್ಲ ಎಂದು ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ ಹೇಳಿದರು. ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ. ನಿರ್ದಿಷ್ಟ ವಯೋಮಾನದ ಮಹಿಳೆಯರು ಪ್ರವೇಶ ಮಾಡಬಾರದು ಎಂಬ ನಿಯಮಗಳಿವೆ. ಭಕ್ತಿಯಿಂದ ದೇವಸ್ಥಾನ ಪ್ರವೇಶಿಸಿದರೆ ತಪ್ಪಲ್ಲ, ಬಲಾತ್ಕಾರದಿಂದ ದೇವಸ್ಥಾನ ಪ್ರವೇಶಿಸಬಾರದು ಎಂದರು. ಸರ್ಕಾರದ ಮಟ್ಟದಲ್ಲಿ ಕೆಲವೊಂದು ಶಿಷ್ಟಾಚಾರಗಳಿದ್ದು, ಅದನ್ನು ಕಡ್ಡಾಯವಾಗಿ ಪಾಲಿಸಲಾಗುತ್ತದೆ. ಹಾಗೆಯೇ ಧರ್ಮಕ್ಷೇತ್ರಗಳಲ್ಲಿ ಧಾರ್ಮಿಕ ಸಂವಿಧಾನ ಅಸ್ತಿತ್ವದಲ್ಲಿದೆ. […]