ಶಕ್ತಿ ಯೋಜನೆಗೆ ಭರ್ಜರಿ ಬಲ: ಉಡುಪಿ ಜಿಲ್ಲೆಯಲ್ಲಿ 9.71 ಲಕ್ಷ ಮಹಿಳಾ ಪ್ರಯಾಣಿಕರ ಪ್ರಯಾಣ; 3.62 ಕೋಟಿ ರೂ ಆದಾಯ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯ ಮೂಲಕ ಉಡುಪಿ ಜಿಲ್ಲೆಯ ಸರಕಾರಿ ಬಸ್ ಗಳಲ್ಲಿ 9.71 ಲಕ್ಷ ಮಹಿಳಾ ಪ್ರಯಾಣಿಕರು ಸಂಚರಿಸಿದ್ದು, ಸಾರಿಗೆ ಸಂಸ್ಥೆಗೆ ಜುಲೈ 14 ರ ವರೆಗೆ ಇದುವರೆಗೆ 3.62 ಕೋಟಿ ರೂ ಆದಾಯ ಬಂದಿದೆ. ಉಡುಪಿ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಡುಪಿ ಮತ್ತು ಕುಂದಾಪುರ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ನಗರ ಸಾರಿಗೆ, ವೇಗದೂತ ಮತ್ತು ಸಾಮಾನ್ಯ ಸಾರಿಗೆ ವರ್ಗ ಈ ಎಲ್ಲಾ […]
ಸರ್ಕಾರಿ ಬಸ್ ಕೊರತೆಯಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ
ಉಡುಪಿ: ಸರ್ಕಾರಿ ಬಸ್ ಕೊರತೆ ಮತ್ತು ಸಮಸ್ಯೆಗಳ ಕುರಿತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಡೆಸಿದ ರಾಜ್ಯಾದ್ಯಂತ ಹೋರಾಟದ ಅಂಗವಾಗಿ ಅ. ಭಾ. ವಿ. ಪ. ಉಡುಪಿ ವತಿಯಿಂದ ಅಜ್ಜರಕಾಡು ಯುದ್ಧ ಸ್ಮಾರಕದ ಬಳಿ ಹೋರಾಟ ನಡೆಸಲಾಯಿತು. ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಸುಮುಖ ಭಟ್, ತಾಲೂಕು ಸಂಚಾಲಕ ಶ್ರೀಹರಿ , ನಗರ ಕಾರ್ಯದರ್ಶಿ ಗಣೇಶ್ ಪೂಜಾರಿ ಹಾಗೂ ಪ್ರಮುಖರದ ಆಶೀಶ್ ಶೆಟ್ಟಿ, ಅಜಿತ್, ವಿನೋದ, ನವೀನ್ ,ಉಪಸ್ಥಿತರಿದ್ದರು. ನಗರ ಸಹ ಕಾರ್ಯದರ್ಶಿ ಶ್ರೀವತ್ಸ ಮಾತನಾಡಿ ಗ್ರಾಮೀಣ ಪ್ರದೇಶಗಳಲ್ಲಿ […]
ರಾಜ್ಯ ಸಾರಿಗೆ ಬಸ್ ನಲ್ಲಿ ವಿದ್ಯಾರ್ಥಿ ಬಸ್ ಪಾಸ್ ಗಾಗಿ ಅರ್ಜಿ ಆಹ್ವಾನ
ಉಡುಪಿ: ಪ್ರಸಕ್ತ ಸಾಲಿನಲ್ಲಿ ಕ.ರಾ.ರ.ಸಾ. ನಿಗಮದ ರಿಯಾಯಿತಿ ದರದ ವಿದ್ಯಾರ್ಥಿ ಬಸ್‌ಪಾಸ್ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in. ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಕರ್ನಾಟಕ-ಒನ್, ಗ್ರಾಮ ಒನ್ ಕೇಂದ್ರಗಳಲ್ಲಿಯೂ ಸಹ ರೂ.30 ಸೇವಾ ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ ಸರ್ಕಾರವು ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿದ್ದು, ನೆರೆರಾಜ್ಯದಲ್ಲಿ ವಾಸವಿದ್ದು, ಕರ್ನಾಟಕ ರಾಜ್ಯದ ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, […]
ಉಡುಪಿಯಲ್ಲಿ ಹೆಚ್ಚಿನ ನರ್ಮ ಬಸ್ ಗಳನ್ನು ಓಡಿಸುವಂತೆ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ ಬ್ಲಾಕ್ ಕಾಂಗ್ರೆಸ್ ಸಮಿತಿ
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು “ಶಕ್ತಿ ಯೋಜನೆ” ಉಚಿತ ಬಸ್ ಪ್ರಯಾಣವನ್ನು ಜಿಲ್ಲೆಯಲ್ಲಿ ಉದ್ಘಾಟಿಸಿದ ಬಳಿಕ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ಉಡುಪಿ ಜಿಲ್ಲೆಯಾದ್ಯಂತ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ನರ್ಮ್ ಬಸ್‌ಗಳನ್ನು ಪುನರಾರಂಭಿಸಿ ಹೆಚ್ಚಿನ ಬಸ್‌ಗಳನ್ನು ಒದಗಿಸುವ ಬಗ್ಗೆ ಮನವಿ ಸಲ್ಲಿಸಿದರು. ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರ ಮಾಡುತ್ತಿರುವುದರಿಂದ ಜಿಲ್ಲೆಯ ಮಹಿಳೆಯರು […]
ಮಹಿಳೆಯರ ಸ್ವಾಭಿಮಾನ ಮತ್ತು ಸ್ವಾವಲಂಬಿ ಬದುಕಿಗಾಗಿ ಶಕ್ತಿ ಯೋಜನೆ: ಲಕ್ಷ್ಮಿ ಹೆಬ್ಬಾಳ್ಕರ್
ಉಡುಪಿ: ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ ರಾಜ್ಯಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಸಂಚರಿಸಲು ಜಾರಿಗೆ ತಂದಿರುವ ಶಕ್ತಿ ಯೋಜನೆಯು ಮಹಿಳೆಯರ ಸ್ವಾಭಿಮಾನ ಮತ್ತು ಸ್ವಾವಲಂಬಿ ಬದುಕಿಗೆ ನೆರವಾಗಲಿದೆ ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಅವರು ಇಂದು ಉಡುಪಿಯು ಸರ್ಕಾರಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ರಾಜ್ಯದಲ್ಲಿ 20,000 […]