ಕನ್ನಡ ಹಿರಿಯ ನಟ ಶನಿ ಮಹಾದೇವಪ್ಪ ಇನ್ನಿಲ್ಲ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶನಿ ಮಹಾದೇವಪ್ಪ(90) ಇಂದು ನಿಧನರಾದರು. ನಗರದ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಸಂಜೆ ನಾಲ್ಕು ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ಕವಿರತ್ನ ಕಾಳಿದಾಸ, ಭಕ್ತ ಕುಂಬಾರ, ಶ್ರೀನಿವಾಸ ಕಲ್ಯಾಣದಂತಹ ಪ್ರಮುಖ ಚಿತ್ರಗಳು ಸೇರಿದಂತೆ ವರನಟ ಡಾ.ರಾಜ್ ಕುಮಾರ್ ಅವರ ಜೊತೆಯಲ್ಲಿ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ಶನಿ ಮಹಾದೇವಪ್ಪ ನಟಿಸಿದ್ದರು. ಒಟ್ಟಾರೆ ತಮ್ಮ ಸಿನಿಮಾ ಪಯಣದಲ್ಲಿ 550ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.