ಕುಂದಾಪುರ ಶನಿವಾರ ಸಂತೆಗೆ ಮುಗಿಬಿದ್ದ ಜನತೆ, ಗುಂಪು ಚದುರಿಸಲು ಲಾಠಿ ಬೀಸಿದ ಪೊಲೀಸರು
ಕುಂದಾಪುರ: ಗ್ರಾಮೀಣ ಭಾಗದ ಅಂಗಡಿಗಳಲ್ಲಿ ದಿನಸಿ ಹಾಗೂ ತರಕಾರಿ ಸಾಮಾಗ್ರಿಗಳಿಗೆ ಕೊರತೆಯಾಗಬಾರದೆಂಬ ದಿಸೆಯಲ್ಲಿ ಕೇವಲ ಅಂಗಡಿ ವ್ಯಾಪಾರಸ್ಥರಿಗೆ ಮಾತ್ರ ಆಹಾರ ಸಾಮಾಗ್ರಿ ಖರೀದಿಸಲು ಅವಕಾಶ ಕಲ್ಪಿಸಿದ್ದ ಶನಿವಾರದ ಕುಂದಾಪುರದ ಸಂತೆಯಲ್ಲಿ ಸಾರ್ವಜನಿಕರು ಮುಗಿಬಿದ್ದ ದೃಶ್ಯ ಕಂಡುಬಂದಿತು. ಪರಿಣಾಮ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದರು. ಲಾಕ್‌ಡೌನ್ ಆದೇಶ ಇರುವ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕೇವಲ ಹೋಲ್‌ಸೇಲ್ ಮಾರಾಟಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಎಪಿಎಂಸಿ ಆವರಣದ ಮೂರು ಗೇಟ್‌ಗಳನ್ನು ಬಂದ್ ಮಾಡಿ ಮೂರು ಪ್ರವೇಶ […]