ಶಂಕರಾಚಾರ್ಯರ ತತ್ವಗಳು ಐಕ್ಯತೆ ಮೂಡಿಸುವಲ್ಲಿ ಸಹಕಾರಿ: ಅಪರ ಜಿಲ್ಲಾಧಿಕಾರಿ ವೀಣಾ

ಉಡುಪಿ: ಸನಾತನ ಹಿಂದೂ ಧರ್ಮದ ಉಳಿವು ಮತ್ತು ಬೆಳವಣಿಗೆಗೆ ಶಂಕರಾಚಾರ್ಯರು ನೀಡಿರುವ ಕೊಡುಗೆ ಅಪಾರವಾದುದು ಎಂದು ಅಪರ ಜಿಲ್ಲಾಧಿಕಾರಿ ವೀಣಾ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾರ್ವಜನಿಕರಲ್ಲಿ ಭಕ್ತಿಯ ಭಾವನೆ ತುಂಬುವುದರ ಮೂಲಕ ಹಾಗೂ ದೇವಾಲಯಗಳ ಸ್ಥಾಪನೆ ಮೂಲಕ ಹಿಂದೂ ಧರ್ಮದ ಬೆಳವಣಿಗೆಗೆ ಕೊಡುಗೆ ನೀಡಿದ್ದ ಶಂಕರಾಚಾರ್ಯರು, ದೇಶದಾದ್ಯಂತ […]

ಮೇ 6 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಂಕರಾಚಾರ್ಯ ಜಯಂತಿ

ಉಡುಪಿ: ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆಯು ಮೇ 6 ರಂದು ಬೆಳಗ್ಗೆ 10 ಗಂಟೆಗೆ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ