ಪಡುಬಿದ್ರೆ: ನಂದಿಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ
ಪಡುಬಿದ್ರೆ: ನಂದಿಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವವು ಅ. 15 ರಿಂದ 24 ರವರೆಗೆ ಪ್ರತೀ ವರ್ಷದಂತೆ ಭಕ್ತಾದಿಗಳ ಆಸ್ತಿಕರ ಸಹಕಾರದೊಂದಿಗೆ ವೈಭವದಿಂದ ನಡೆಯಲಿರುವುದು. ಭಕ್ತಾದಿಗಳು ಈ ಪರ್ವ ಕಾಲದಲ್ಲಿ ಶ್ರೀ ದೇವಿಯ ದರ್ಶನ ಮಾಡಿ ಶ್ರೀ ಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ, ಶ್ರೀ ದೇವಿಯ ಕೃಪೆಗೆ ಪಾತ್ರರಾಗಿಬೇಕಾಗಿ ದೇವಸ್ಥಾನದ ಆಡಳಿತ ಮಂಡಳಿಯ ಪ್ರಕಟಾಣೆ ತಿಳಿಸಿದೆ. ನವರಾತ್ರಿ ಕಾರ್ಯಕ್ರಮಗಳು ಪ್ರತೀದಿನ ಮಧ್ಯಾಹ್ನ ಗಂಟೆ 12.00ಕ್ಕೆ ಮಹಾಪೂಜೆ, ರಾತ್ರಿ ಗಂಟೆ 8.00ಕ್ಕೆ ನವರಾತ್ರಿ ಪೂಜೆ ನಡೆಯಲಿರುವುದು. 15/10/2023 […]
ಕಾರ್ಕಳ: ಶ್ರೀ ಮಹಮ್ಮಾಯಿ ಗದ್ದಿಗೆ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ
ಕಾರ್ಕಳ: ಶ್ರೀ ಮಹಮ್ಮಾಯಿ ಗದ್ದಿಗೆ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವವು ಅಕ್ಟೋಬರ್ 15 ರಿಂದ 23 ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಅ.15 ರಿಂದ 23 ರವರೆಗೆ ಪ್ರತಿನಿತ್ಯವು ತ್ರಿಕಾಲ ಪೂಜೆ ಹಾಗೂ ಗ್ರಾಮಸ್ತರಿಂದ ನಿತ್ಯ ಭಜನೆ ಜರಗಲಿರುವುದು. ಅ.22 ರಂದು ಬ್ರಹ್ಮಶ್ರೀ ಭಜನಾ ಮಂಡಳಿ ಮಾತಿಬೆಟ್ಟು ಇವರಿಂದ ಭಜನಾ ಕಾರ್ಯಕ್ರಮ. ಅ.23ರಂದು ಮಹಾನವಮಿಯ ಪ್ರಯುಕ್ತ ವಿವಿಧ ಭಜನಾ ಮಂಡಳಿಯಿಂದ ಸಂಜೆ 7 ರಿಂದ ಭಜನಾ ಕಾರ್ಯಕ್ರಮ, 8 ರಿಂದ ಪ್ರಸಾದ ವಿತರಣೆ, ಅನ್ನಸಂತರ್ಪಣೆ ಹಾಗೂ 9:30 […]
ಅ.15ರಿಂದ 24: ಶ್ರೀ ಕ್ಷೇತ್ರ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ
ಕುಂದಾಪುರ: ಶ್ರೀ ಕ್ಷೇತ್ರ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅ. 15ರಿಂದ ಅ. 24 ರವರೆಗೆ ದೇವಿ ಸನ್ನಿಧಿಯಲ್ಲಿ ನವರಾತ್ರಿ ವಿಶೇಷ ಪೂಜಾ ಸಮಾರಂಭ ನಡೆಯಲಿದ್ದು, ಅ. 20 ರಂದು ಮೂಲ ನಕ್ಷತ್ರ ದಿನದಂದು ಚಂಡಿಕಾಯಾಗ ಜರುಗಲಿರುವುದು. ನವರಾತ್ರಿಯ ಈ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಆಗಮಿಸಿ, ತನು ಮನ ಧನ ಧಾನ್ಯದಿ ಅರ್ಪಣೆಯೊಂದಿಗೆ ಸಹಕರಿಸಿ, ಶ್ರೀ ದೇವಿಯ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ, ಅಮ್ಮನವರ ಪೂರ್ಣಾನುಗ್ರಹಕ್ಕೆ ಪಾತ್ರರಾಗಬೇಕಾಗಿ ದೇವಳದ ಪ್ರಕಟಣೆ ತಿಳಿಸಿದೆ.
ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅ.15 ರಿಂದ 24ರ ವರೆಗೆ ಶರನ್ನವರಾತ್ರಿ ಮಹೋತ್ಸವ
ಕುಂದಾಪುರ: ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅ.15 ರಿಂದ ಅ. 24 ರವರೆಗೆ ನಡೆಯಲಿರುವ ಶರನ್ನವರಾತ್ರಿ ಮಹೋತ್ಸವಗಳಿಗೆ ಭಕ್ತರು ತಮ್ಮ ಇಷ್ಟಮಿತ್ರ ಬಂಧು ಬಾಂಧವರೊಡಗೂಡಿ ಆಗಮಿಸಿ, ಶ್ರೀ ಸನ್ನಿಧಿಯಲ್ಲಿ ನಡೆಯುವ ಪೂಜಾ ಉತ್ಸವ ಕಾರ್ಯಕ್ರಮಗಳನ್ನು ವೀಕ್ಷಿಸಿ, ಈ ಪ್ರಸನ್ನ ಕಾಲದಲ್ಲಿ ಶ್ರೀ ಮುಡಿಗಂಧ ಪ್ರಸಾದಗಳನ್ನು ಸ್ವೀಕರಿಸಿ, ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ಅಮ್ಮನವರ ಸಂಪೂರ್ಣ ಕೃಪೆಗೆ ಪಾತ್ರರಾಗಬೇಕಾಗಿ ಅನುವಂಶಿಕ ಆಡಳಿತ ಮೊಕ್ತೇಸರ ಶೆಟ್ಟಿಪಾಲು ಸಚ್ಚಿದಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶರನ್ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ 15/10/2023ನೇ […]