ಕಲಿಯುವ ಮಕ್ಕಳನ್ನು ಬಾಲಕಾರ್ಮಿಕರನ್ನಾಗಿಸುವವರ ವಿರುದ್ದ ಕಾನೂನು ಕ್ರಮ: ನ್ಯಾ. ಶರ್ಮಿಳಾ ಎಸ್
ಉಡುಪಿ: ಮಕ್ಕಳಿಗೆ ಬಾಲ್ಯದಲ್ಲಿ ಶಿಕ್ಷಣ ಕೊಡಿಸುವುದು ಮುಖ್ಯ ಕರ್ತವ್ಯವಾಗಿದ್ದು, ಮಕ್ಕಳಿಂದ ದುಡಿಮೆ ಮಾಡಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಘಟನೆಗಳು ಕಂಡುಬಂದಲ್ಲಿ ದುಡಿಸಿಕೊಳ್ಳುವ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಹೇಳಿದರು. ಅವರು ಗುರುವಾರ ಮಲ್ಪೆಯ ಓಷಿಯನ್ ಫ್ರೆಶ್ ಎಕ್ಸ್ಪೋರ್ಟ್ ಸಂಸ್ಥೆಯಲ್ಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ, ಜಿಲ್ಲಾ ಬಾಲಕಾರ್ಮಿಕ ಯೋಜನಾ […]