ಶಾರುಖ್​ ಖಾನ್ ಗೆ ಶೂಟಿಂಗ್​ ವೇಳೆ ಗಾಯ ​, ಯಶಸ್ವಿ ಶಸ್ತ್ರಚಿಕಿತ್ಸೆ

ಲಾಸ್​ ಏಂಜಲೀಸ್​​ನಲ್ಲಿ ನಡೆದ ಸಣ್ಣ ಅವಘಡದಲ್ಲಿ ಶಾರುಖ್​ ಮೂಗಿಗೆ ಗಾಯವಾಗಿದೆ. ಹೀಗಾಗಿ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಚೇತರಿಕೆಯ ಹಾದಿಯಲ್ಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ. ಬಾಲಿವುಡ್​ ನಟ​ ಶಾರುಖ್​ ಖಾನ್ ಅಮೆರಿಕದಲ್ಲಿ​ ಶೂಟಿಂಗ್​ ವೇಳೆ ಗಾಯಗೊಂಡಿದ್ದಾರೆ. ಭಾರತಕ್ಕೆ ಮರಳುವ ಮುನ್ನ ಲಾಸ್​ ಏಂಜಲೀಸ್​ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ. ನಟ ಶಾರುಖ್​ ಖಾನ್​ ಅಮೆರಿಕದಲ್ಲಿ ಶೂಟಿಂಗ್​ ವೇಳೆ ಗಾಯಗೊಂಡಿದ್ದಾರೆ. ಬಹಿರಂಗಪಡಿಸದ ಪ್ರಾಜೆಕ್ಟ್‌ನ ಚಿತ್ರೀಕರಣದಲ್ಲಿದ್ದಾಗ ಘಟನೆ ಸಂಭವಿಸಿದೆ ಎಸ್​​ಆರ್​ಕೆ ಅಪಘಾತವನ್ನು ಹೇಗೆ ಎದುರಿಸಿದರು ಎಂಬ ಬಗ್ಗೆ ಹೆಚ್ಚು ವಿವರಗಳು […]