47 ಸದಸ್ಯರ ಸ್ಟೀರಿಂಗ್ ಸಮಿತಿ ರಚಿಸಿದ ಖರ್ಗೆ: ಶಶಿ ತರೂರ್ ಗಿಲ್ಲ ಜಾಗ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವರು 47 ಜನರ ಸ್ಟೀರಿಂಗ್ ಸಮಿತಿ ರಚಿಸಿದ್ದು, ಇದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸ್ಥಾನದಲ್ಲಿ ಕಾರ್ಯನಿರ್ವಹಿಸಲಿದೆ. ಸಮಿತಿಯ ಪಟ್ಟಿಯಲ್ಲಿ ಕಾಂಗ್ರೆಸ್ ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಮನಮೋಹನ್ ಸಿಂಗ್, ಎ.ಕೆ ಆಂಟನಿ, ಜೈರಾಮ್ ರಮೇಶ್, ರಣದೀಪ್ ಸುರ್ಜೇವಾಲ, ಅಂಬಿಕಾ ಸೋನಿ, ಅಜಯ್ ಮಾಕನ್, ಹರೀಶ್ ರಾವತ್, ಅಭಿಷೇಕ್ ಮನು ಸಿಂಘ್ವಿ ಮುಂತಾದವರಿದ್ದಾರೆ. ಕಾಂಗ್ರೆಸ್ ಪುನರುಜ್ಜೀವನಕ್ಕಾಗಿ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದ ಜಿ-23 ಬಣದ […]

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಅಕ್ರಮದ ಆರೋಪ ಹೊರಿಸಿದ ಶಶಿ ತರೂರ್ ತಂಡ

ನವದೆಹಲಿ: ನವದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಉನ್ನತ ಹುದ್ದೆಯ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಶಶಿ ತರೂರ್ ನೇತೃತ್ವದ ಪಾಳಯವು ಉತ್ತರ ಪ್ರದೇಶದಲ್ಲಿ ಅಕ್ರಮ ನಡೆದಿರುವ ಬಗ್ಗೆ ಆರೋಪಿಸಿದೆ. ಅಕ್ಟೋಬರ್ 19 ರಂದು, ಲೋಕಸಭಾ ಸಂಸದ ಶಶಿ ತರೂರ್ ಪರವಾಗಿ ಕಾಂಗ್ರೆಸ್ ನಾಯಕ ಸಲ್ಮಾನ್ ಸೋಜ್ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರಿಗೆ ಪತ್ರ ಬರೆದು ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ “ಅತ್ಯಂತ ಗಂಭೀರ ಅಕ್ರಮಗಳು” ನಡೆದಿವೆ ಎಂದು ಆರೋಪಿಸಿದ್ದಾರೆ. ಸೋಜ್ ತಮ್ಮ […]

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಗಾಂಧಿ ಕುಟುಂಬ ತಟಸ್ಥ: ಶಶಿ ತರೂರ್

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಗಾಂಧಿ ಕುಟುಂಬದ ಕಡೆಯಿಂದ ಯಾವುದೇ ಅಧಿಕೃತ ಅಭ್ಯರ್ಥಿ ಇಲ್ಲ ಎಂದು ಗಾಂಧಿ ಕುಟುಂಬವು ಮುಖ್ಯ ಚುನಾವಣಾ ಪ್ರಾಧಿಕಾರಿ ಮಧುಸೂದನ್ ಮಿಸ್ತ್ರಿ ಮೂಲಕ ಸ್ಪಷ್ಟಪಡಿಸಿದೆ. ಗಾಂಧಿ ಕುಟುಂಬವು ಈ ವಿಷಯದಲ್ಲಿ ತಟಸ್ಥವಾಗಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಭಾನುವಾರ ಕೆಲವು ನಾಯಕರ ಮೇಲೆ ಒತ್ತಡದ ಸುಳಿವು ಇದೆ ಎನ್ನುತ್ತಾ “ಅಸಮವಾದ ಆಟದ ಮೈದಾನ” ದ […]

ಮಲ್ಲಿಕಾರ್ಜುನ ಖರ್ಗೆ ಅವರಿಂದ ಪಕ್ಷದಲ್ಲಿ ಬದಲಾವಣೆ ತರಲು ಸಾಧ್ಯವಿಲ್ಲ: ಶಶಿ ತರೂರ್

ನವದೆಹಲಿ: ಮಲ್ಲಿಕಾರ್ಜುನ ಖರ್ಗೆ ಅವರಂತಹ ನಾಯಕರಿಂದ ಪಕ್ಷದಲ್ಲಿ ಬದಲಾವಣೆ ತರಲು ಸಾಧ್ಯವಿಲ್ಲ, ಅವರು ಈಗಿರುವ ಪದ್ಧತಿಯನ್ನೇ ಮುಂದುವರಿಸಲಿದ್ದಾರೆ ಎಂದು ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣಾ ಅಖಾಡಕ್ಕಿಳಿದಿರುವ ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ತಮ್ಮ ವಾದವನ್ನು ಮಂಡಿಸಿದ ಶಶಿ ತರೂರ್ ತಾವು ಆಯ್ಕೆಯಾದರೆ ಪಕ್ಷದ ಕಾರ್ಯಕರ್ತರ ನಿರೀಕ್ಷೆಗೆ ತಕ್ಕಂತೆ ಬದಲಾವಣೆ ತರುವುದಾಗಿ ಹೇಳಿದ್ದಾರೆ. ನಾವು ಶತ್ರುಗಳಲ್ಲ, ಇದು ಯುದ್ಧವಲ್ಲ. ಇದು ನಮ್ಮ ಪಕ್ಷದ ಭವಿಷ್ಯದ ಸಮೀಕ್ಷೆ. ಕಾಂಗ್ರೆಸ್ ಪಕ್ಷದ ಪ್ರಮುಖ ಮೂವರು ನಾಯಕರಲ್ಲಿ […]

ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಮಧ್ಯೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಹಣಾಹಣಿ

ನವದೆಹಲಿ: ಕರ್ನಾಟಕದ ‘ಸೋಲಿಲ್ಲದ ಸರದಾರ’ ಕಾಂಗ್ರೆಸ್ ಅಧ್ಯಕ್ಷಗಿರಿಗೆ ಗಾಂಧಿ ಕುಟುಂಬದ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾದರೆ, ಎಸ್ ನಿಜಲಿಂಗಪ್ಪ (1968-69) ನಂತರ ಕರ್ನಾಟಕದಿಂದ ಆಯ್ಕೆಯಾದ ಎಐಸಿಸಿಯ ಎರಡನೇ ಅಧ್ಯಕ್ಷರಾಗುತ್ತಾರೆ. ರಾಜಕೀಯದಲ್ಲಿ 50 ವರ್ಷಕ್ಕೂ ಹೆಚ್ಚು ಅನುಭವ ಹೊಂದಿರುವ ಖರ್ಗೆ ಅವರು ದಕ್ಷಿಣ ಭಾರತದಿಂದ ಅಧ್ಯಕ್ಷ ಗಾದಿಗೆ ಸ್ಪರ್ಧಿಸುವ ಆರನೇ ಕಾಂಗ್ರೆಸ್ಸಿಗ. ಒಂದು ವೇಳೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಆಯ್ಕೆಯಾದಲ್ಲಿ ಖರ್ಗೆಯವರು ಜಗಜೀವನ್ ರಾಮ್ ನಂತರ ಉನ್ನತ ಹುದ್ದೆಯನ್ನು ಅಲಂಕರಿಸಿದ ಎರಡನೇ ದಲಿತ ನಾಯಕರಾಗಲಿದ್ದಾರೆ. […]