ಕುಂತಳನಗರ ಶಾಲೆಯಲ್ಲಿ ಶೆಫಿನ್ಸ್ ಸ್ಪೋಕನ್ ಇಂಗ್ಲಿಷ್ ತರಬೇತಿ ಉದ್ಘಾಟನೆ
ಉಡುಪಿ: ನೆರೆಮನೆಯವರ ಮಕ್ಕಳಂತೆಯೇ ನಮ್ಮ ಮಕ್ಕಳೂ ಸಹ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಓದಬೇಕು ಎನ್ನುವ ಹಂಬಲದಿಂದ ಆರ್ಥಿಕವಾಗಿ ಸಬಲರಲ್ಲದ ಅನೇಕ ಪೋಷಕರು, ಸಾಲ ಮಾಡಿ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗಳಿಗೆ ಕಳುಹಿಸುತ್ತಿರುವ ರೂಢಿ ಹೆಚ್ಚಾಗುತ್ತಿದ್ದು, ಇದರಿಂದಾಗಿ ಪೋಷಕರ ಆರ್ಥಿಕ ಪರಿಸ್ಥಿತಿ ಬಹಳಷ್ಟು ಹದಗೆಟ್ಟ ಅನೇಕ ಉದಾಹರಣೆಗಳು ನಮ್ಮ ಮುಂದಿವೆ. ಇಂತಹ ಪೋಷಕರು ಮಕ್ಕಳಿಗೆ ಉಚಿತವಾಗಿ ಸ್ಪೋಕನ್ ಇಂಗ್ಲಿಷ್ ಕಲಿಸುತ್ತಿರುವ ಸರಕಾರಿ ಮತ್ತು ಅನುದಾನಿತ ಶಾಲೆಗಳತ್ತ ಮಕ್ಕಳನ್ನು ಕರೆತರುವ ಮೂಲಕ ಮಕ್ಕಳ ಇಂಗ್ಲಿಷ್ ಸಂವಹನದ ಕನಸನ್ನು ನನಸಾಗಿಸುವುದರೊಂದಿಗೆ ಆರ್ಥಿಕವಾಗಿ […]
ನ. 28 ರಿಂದ 1ರ ವರೆಗೆ ಶೆಫಿನ್ಸ್ ವತಿಯಿಂದ ಶಾಲಾ ಶಿಕ್ಷಕರಿಗೆ ಉಚಿತ ಸ್ಪೋಕನ್ ಇಂಗ್ಲಿಷ್ ತರಬೇತಿ
ಉಡುಪಿ: ಉಡುಪಿಯ ಶೆಫಿನ್ಸ್ ಎಜುಕೇಶನಲ್ ಎಂಡ್ ಚಾರಿಟೇಬಲ್ ವತಿಯಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಅತಿಥಿ ಹಾಗೂ ಗೌರವ ಶಿಕ್ಷಕರಿಗೆ ಉಚಿತ ಸ್ಪೋಕನ್ ಇಂಗ್ಲೀಷ್ ತರಬೇತಿ ಕಾರ್ಯಕ್ರಮವು ನಗರದಲ್ಲಿ ನ. 28 ರಿಂದ 1ರ ವರೆಗೆ (ಒಟ್ಟು 4 ದಿನ) ನಡೆಯಲಿರುವುದು. ಈ ತರಬೇತಿಯು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಈ ಶೈಕ್ಷಣಿಕ ವರ್ಷದ ಕೊನೆಯ ತರಬೇತಿಯಾಗಿದೆ. ತರಬೇತಿಗೆ ತಮ್ಮ ಶಾಲಾ ಅತಿಥಿ ಹಾಗೂ ಗೌರವ ಶಿಕ್ಷಕರನ್ನು ಕಳುಹಿಸಲು ಆಸಕ್ತರಿರುವ ಶಾಲಾ ಮುಖ್ಯಸ್ಥರುಗಳು ನ. 24 […]