ಸಂದೇಶ್‌ಖಾಲಿ ಹಿಂಸಾಚಾರ: ಮಮತಾ ಬ್ಯಾನರ್ಜಿ ಸರಕಾರಕ್ಕೆ ಹೈ ಕೋರ್ಟ್ ತರಾಟೆ; ಶಹಜಹಾನ್ ಶೇಖ್ ಶರಣಾಗತಿಗೆ ಸೂಚನೆ
ಕೊಲ್ಕತ್ತ: ಸಂದೇಶ್‌ಖಾಲಿ (Sandeshkhali ) ಹಿಂಸಾಚಾರ ಕುರಿತು ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಪಶ್ಚಿಮ ಬಂಗಾಳ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಒಬ್ಬ ವ್ಯಕ್ತಿಯು ಎಲ್ಲವನ್ನೂ ಸುಲಿಗೆ ಮಾಡುತ್ತಿರಲು ಸಾಧ್ಯವಿಲ್ಲ ಮತ್ತು ಹಲವಾರು ಮಹಿಳೆಯರಿಂದ ಲೈಂಗಿಕ ದೌರ್ಜನ್ಯ ಮತ್ತು ಭೂಹಗರಣದ ಆರೋಪ ಹೊತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕ ಶಹಜಹಾನ್ ಶೇಖ್ ನನ್ನು ರಾಜ್ಯವು ಬೆಂಬಲಿಸಬಾರದು ಎಂದು ಹೇಳಿದೆ. ರಾಜ್ಯ ಸರ್ಕಾರವು ಆತನನ್ನು ಪ್ರೋತ್ಸಾಹಿಸಲು ಸಾಧ್ಯವಿಲ್ಲ. ಆತ ಹಾನಿ ಮಾಡಿದ್ದಾನೆ ಎಂದು ತೋರಿಸಲು ಪ್ರಾಥಮಿಕ ಸಾಕ್ಷ್ಯಗಳಿವೆ. ಒಬ್ಬ ವ್ಯಕ್ತಿಯು ಇಡೀ ಜನಸಂಖ್ಯೆಯನ್ನು […]