ವಿಶ್ವಕಪ್‌ ಟೂರ್ನಿಯಿಂದ ಧವನ್ ಹೊರಕ್ಕೆ..! ಋಷಬ್ ಪಂತ್ ತಂಡ ಸೇರ್ಪಡೆ 

ಲಂಡನ್: ಗಾಯದ ಸಮಸ್ಯೆಯಿಂದ ಕಳೆದ ಪಂದ್ಯದಲ್ಲಿ ತಂಡದಿಂದ ಹೊರಗುಳಿದಿದ್ದ ಟೀಂ‌ ಇಂಡಿಯಾದ ಆರಂಭಿಕ ಬ್ಯಾಟ್ಸ್ಮ್ಯಾನ್ ಶಿಖರ್ ಧವನ್ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಹೀಗಾಗಿ ವಿಶ್ವಕಪ್ ಲೀಗ್ ಪಂದ್ಯದಲ್ಲಿ ಇದುವರೆಗಿನ ಎಲ್ಲಾ ಪಂದ್ಯಗಳಲ್ಲಿ ಗೆಲುವು ಸಾಧಿಸಿ, ಅಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೆ ಸಜ್ಜಾಗುತ್ತಿರುವ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ನೇಥನ್ ಕೌಲ್ಟರ್ ನೈಲ್ ಎಸೆತದಲ್ಲಿ ಕೈಬೆರಳಿಗೆ ಗಾಯವಾಗಿತ್ತು. ಹೀಗಾಗಿ ಪಾಕಿಸ್ತಾನ ವಿರುದ್ದದ ಪಂದ್ಯದಿಂದ ಹೊರಗುಳಿದಿದ್ದರು. ಬಳಿಕ ಇಂಗ್ಲೆಂಡ್‌ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಧವನ್ ಬದಲು ವಿಕೆಟ್ […]

ವಿಶ್ವಕಪ್ ನಿಂದ ಶಿಖರ್ ಧವನ್ ಔಟ್..! ಬೆರಳಿನ‌ ಗಾಯದ ಸಮಸ್ಯೆ ಹಿನ್ನೆಲೆ

ನವದೆಹಲಿ: ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ತೋರುತ್ತಿರುವ ಸಮಯದಲ್ಲೇ ತಂಡಕ್ಕೆ ದೊಡ್ಡ ಆಘಾತ ಎದುರಾಗಿದ್ದು, ಆರಂಭಿಕ ಆಟಗಾರ ಶಿಖರ್ ಧವನ್ ಗಾಯದ ಸಮಸ್ಯೆಯಿಂದ ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ. ಕಳೆದ ಆಸ್ಟ್ರೇಲಿಯಾ ವಿರುದ್ದದ ಪಂದ್ಯದ ವೇಳೆ ಎಡಗೈ ಹೆಬ್ಬರಳಿಗೆ ಗಾಯವಾಗಿತ್ತು. ಹೀಗಾಗಿ ವೈದ್ಯಾಧಿಕಾರಿಗಳು ಪರೀಕ್ಷೆ ನಡೆಸಿದ್ದು, ಇನ್ನು ಮೂರು ವಾರಗಳ ಕಾಲ ವಿಶ್ರಾಂತಿ ಮಾಡುವಂತೆ ಸೂಚಿಸಿದ್ದಾರೆ. ಬೆರಳಿಗೆ ಆಗಿರುವ ಗಾಯದ ಪ್ರಮಾಣವನ್ನು ಪತ್ತೆ ಹಚ್ಚಲು ಸ್ಕಾನಿಂಗ್ ಮಾಡಲಾಗಿದ್ದು, ಅನಂತರ ವರದಿ ಪರಿಶೀಲಿಸಿದ ವೈದ್ಯರು, ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ. ಆಸ್ಟ್ರೇಲಿಯಾ […]