ಮರಿಗಾಗಿ ಕ್ಷೇತ್ರ ತ್ಯಜಿಸಿದ ರಾಜಾಹುಲಿ: ಪುತ್ರ ವಿಜಯೇಂದ್ರನಿಗಾಗಿ ಶಿಕಾರಿಪುರ ಬಿಟ್ಟುಕೊಟ್ಟ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ
ಶಿವಮೊಗ್ಗ: ಯಡಿಯೂರಪ್ಪನವರ ಚುನಾವಣಾ ಕ್ಷೇತ್ರವಾದ ಶಿಕಾರಿಪುರವನ್ನು ತನ್ನ ಮಗ ಬಿ.ವೈ ವಿಜಯೇಂದ್ರನಿಗಾಗಿ ಬಿಟ್ಟು ಕೊಟ್ಟಿದ್ದಾರೆ ಎಂದು ವರದಿಯಾಗಿದೆ. ಇನ್ನು ಮುಂದೆ ಈ ಕ್ಷೇತ್ರದಿಂದ ಬಿ.ವೈ ವಿಜಯೇಂದ್ರ ಅಖಾಡಕ್ಕಿಳಿಯಲಿದ್ದಾರೆ. ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ವೈ ಈ ಘೋಷಣೆ ಮಾಡಿದ್ದಾರೆ ಎಂದು ಇಲ್ಲಿನ ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ಹಳೆ ಮೈಸೂರು ಭಾಗದಲ್ಲಿ ಬೆಂಬಲವಿದ್ದರೂ, ತಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವಾದ್ದರಿಂದ ಕ್ಷೇತವನ್ನು ಬಿಟ್ಟುಕೊಟ್ಟಿದ್ದೇನೆ ಎಂದಿದ್ದಾರೆ. ಮಗನನ್ನು ತನಗಿಂತಲೂ ಹೆಚ್ಚಿನ ಅಂತರದಲ್ಲಿ ಗೆಲ್ಲಿಸುವಂತೆ ಬಿ.ಎಸ್.ವೈ ಮನವಿ ಮಾಡಿದ್ದಾರೆ. […]