ಪ್ರೊ. ಪಾದೂರು ಶ್ರೀಪತಿ ತಂತ್ರಿ ಅವರ ೮೦ ಸಂವತ್ಸರದ ಹಿನ್ನೆಲೆಯಲ್ಲಿ ವಿಚಾರಗೋಷ್ಠಿ, ಅಭಿನಂದನಾ ಸಮಾರಂಭ
ಉಡುಪಿ: ಹಿರಿಯ ಶಿಕ್ಷಣ ತಜ್ಞ ಪ್ರೊ. ಪಾದೂರು ಶ್ರೀಪತಿ ತಂತ್ರಿ ಅವರು ೮೦ ಸಂವತ್ಸರ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಇದೇ ೨೧ರಂದು ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್‌ನ ಒಳಾಂಗಣ ಸಭಾಂಗಣದಲ್ಲಿ ವಿಚಾರಗೋಷ್ಠಿ ಹಾಗೂ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ಅಭಿನಂದನ ಸಮಿತಿಯ ಸಂಯೋಜಕ ಪ್ರೊ. ವರದೇಶ ಹಿರೇಗಂಗೆ ಗುರುವಾರ ಸುದ್ದಿಗೋಷ್ಢಿಯಲ್ಲಿತಿಳಿಸಿದರು. ಅಂದು ಬೆಳಿಗ್ಗೆ ೯.೩೦ಕ್ಕೆ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ವಿಚಾರಗೋಷ್ಠಿಯನ್ನು ಉದ್ಘಾಟಿಸುವರು. ಸಂಸ್ಕೃತ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಮಲ್ಲೇಪುರಂ ವೆಂಕಟೇಶ ಅವರು ಶ್ರೀಪತಿ ತಂತ್ರಿಯವರ […]