ಶಿವಮೊಗ್ಗದಲ್ಲಿ ದ. ಆಫ್ರಿಕಾ ರೂಪಾಂತರಿ ವೈರಸ್ ಪತ್ತೆ: ಜನತೆಯಲ್ಲಿ ಆತಂಕ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ದಕ್ಷಿಣ ಆಫ್ರಿಕಾದ ರೂಪಾಂತರಿ ಕೊರೊನಾ ವೈರಸ್ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಶುರುವಾಗಿದೆ. ದುಬೈನಿಂದ ಶಿವಮೊಗ್ಗಕ್ಕೆ ಇತ್ತೀಚೆಗೆ ಬಂದಿದ್ದ 53 ವರ್ಷದ ವ್ಯಕ್ತಿಯಲ್ಲಿ ಈ ಸೋಂಕು ಪತ್ತೆಯಾಗಿದೆ. ಇವರು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ಬಳಿಕ ಅವರಲ್ಲಿ ಆಫ್ರಿಕಾದ ವೈರಸ್ ಕಾಣಿಸಿಕೊಂಡಿದೆ ಎಂದು ಶಿವಮೊಗ್ಗ ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ. ಈ ವ್ಯಕ್ತಿ 18 ದಿನಗಳ ಹಿಂದೆ ಕರ್ನಾಟಕಕ್ಕೆ ಬಂದಿದ್ದರು. ಆಗ ಇವರ ಸ್ಯಾಂಪಲ್ ಪರೀಕ್ಷೆ ನಡೆಸಿದ್ದು, ಯಾವುದೇ ರೋಗಲಕ್ಷಣ […]