ಶಿವಮೊಗ್ಗ: ಜಲ್ಲಿಕ್ರಷರ್ ನಲ್ಲಿದ್ದ ಡೈನಾಮೈಟ್ ಸ್ಫೋಟ: 8 ಕಾರ್ಮಿಕರ ದುರ್ಮರಣ

ಶಿವಮೊಗ್ಗ: ಅಬ್ಬಲಗೆರೆ–ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್‌ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್‌ ಗುರುವಾರ ರಾತ್ರಿ ಸ್ಫೋಟಿಸಿ, ಬಿಹಾರ ಮೂಲದ ಸುಮಾರು 8 ಕಾರ್ಮಿಕರು ಮೃತಪಟ್ಟಿದ್ದಾರೆ. ಕಲ್ಲು ಗಣಿಗಾರಿಕೆಗಾಗಿ ಲಾರಿಯಲ್ಲಿ ತಂದಿದ್ದ 50 ಡೈನಾಮೈಟ್‌ ಬಾಕ್ಸ್‌ಗಳು ಸ್ಫೋಟಗೊಂಡು ಅನಾಹುತ ಸಂಭವಿಸಿದೆ. ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿವೆ. ಸ್ಥಳದಲ್ಲಿದ್ದ ಯಾರೊಬ್ಬರು ಬದುಕುಳಿದಿರುವ ಸಾಧ್ಯತೆ ಇಲ್ಲ ಎಂದು ತಿಳಿದು ಬಂದಿದೆ. ಲಾರಿಯಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಜಿಲೆಟಿನ್ ಕಡ್ಡಿಗಳಲ್ಲಿ, ಬಹುತೇಕ ಜಿಲ್ಲೆಟಿನ್ ಕಡ್ಡಿಗಳು ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ […]