ಶಿವಮೊಗ್ಗ ಹತ್ಯೆ ಪ್ರಕರಣ; ಕಾನೂನು ಕೈಗೆತ್ತಿಕೊಳ್ಳದೆ ಸರ್ಕಾರದ ಮೇಲೆ ಒತ್ತಡ ಹೇರಿ; ಪೇಜಾವರ ಶ್ರೀ ಮನವಿ
ಉಡುಪಿ: ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆ ಅತ್ಯಂತ ಖಂಡನೀಯ. ಮೇಲಿಂದ ಮೇಲೆ ಸಮಾಜದಲ್ಲಿ ನಡೆಯುತ್ತಿರುವ ಇಂತಹ ಘಾತಕ ಕೃತ್ಯಗಳಿಂದ ನಮ್ಮ ಸರ್ಕಾರ ಹಾಗೂ ನ್ಯಾಯಾಂಗ ವ್ಯವಸ್ಥೆ ಮೇಲೆ ಜನರು ನಂಬಿಕೆ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣ ಆಗುತ್ತಿದೆ. ಹಾಗಾಗಿ ಜನರು ಯಾವುದೇ ಕಾನೂನು ಕೈಗೆತ್ತಿಕೊಳ್ಳದೆ, ನ್ಯಾಯಾಂಗ ಹಾಗೂ ಕಾರ್ಯಾಂಗದ ಮೇಲೆ ಒತ್ತಡ ಹೇರುವ ಮೂಲಕ ನ್ಯಾಯ ದೊರಕಿಸುವ ಕೆಲಸ ಮಾಡಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಮನವಿ ಮಾಡಿದರು. ಇಂದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ […]