ಕುಂದಾಪುರ: ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿ ಅಲೆಯಲ್ಲಿ ಗೆದ್ದವರು ಹೆಸರು ಉಳಿಸಿಕೊಂಡಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಕೂಡ ಜನರಿಗೆ ಕೊಟ್ಟ ಆಶ್ವಾಸನೆಗಳನ್ನು ಈಡೇರಿಸಿಲ್ಲ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ವಿರುದ್ದ ಅಲೆ ಇದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದರು. ಅವರು ಭಾನುವಾರ ಮರವಂತೆಯ ಸಾಧನ ಸಭಾಭವನದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ರೈತರು, ಬಡವರು, ಯುವಕರನ್ನು ಬಿಜೆಪಿ ನೇತೃತ್ವದ ಮೋದಿ ಸರ್ಕಾರ ಸಂಪೂರ್ಣ ನಿರ್ಲಕ್ಷಿಸಿದೆ. ಕೊಟ್ಟ ಭರವಸೆಗಳನ್ನು ಇದುವರೆಗೆ ಈಡೇರಿಸಿಲ್ಲ. […]