ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ ಮನೆ ಮೇಲೆ ಇಡಿ ದಾಳಿ
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರ ಮನೆ ಸೇರಿದಂತೆ ಇತರ ಕಡೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಇಂದು ನಸುಕಿನ ಜಾವ 3:30 ರ ಸುಮಾರಿಗೆ ಇಡಿ ಅಧಿಕಾರಿಗಳು ತಮ್ಮ ದಾಳಿಯನ್ನು ಪ್ರಾರಂಭಿಸಿದ್ದಾರೆ. ಡಿಸಿಸಿ ಬ್ಯಾಂಕ್ನಲ್ಲಿ ಅಡಮಾನ ಚಿನ್ನದ ಮೇಲಿನ ಸಾಲದಲ್ಲಿ ನಕಲಿ ಬಂಗಾರವನ್ನಿಟ್ಟುಕೊಂಡು ಸಾಲ ನೀಡಿದ ಬಹುಕೋಟಿ ಹಗರಣದಲ್ಲಿ ಮಂಜುನಾನಾಥ್ ಗೌಡ ಅವರ ಮೇಲೆ ಪ್ರಕರಣ ದಾಖಲಾಗಿತ್ತು. ಈ ವಿಚಾರದಲ್ಲಿ ಇಡಿ ಇಲಾಖೆಗೆ ದೂರು ಹೋದ ಪರಿಣಾಮ […]