ಬಸ್ ಮತ್ತು ಗೂಡ್ಸ್ ಟೆಂಪೊ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಉಡುಪಿ: ಇಲ್ಲಿನ ಶಿರಿಬೀಡಿನಲ್ಲಿ ಬಸ್ ಮತ್ತು ಗೂಡ್ಸ್ ಟೆಂಪೊ ರಿಕ್ಷಾ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರದಂದು ನಡೆದಿದೆ. ಕರಾವಳಿ ಬೈಪಾಸ್ ಕಡೆಯಿಂದ ಮಣಿಪಾಲ ಕಡೆ ಹೋಗುತ್ತಿದ್ದ ಖಾಸಗಿ ಬಸ್ ಒಂದು ಶಿರಿಬೀಡು ಜಂಕ್ಷನ್ ಸಮೀಪ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ಬರುತ್ತಿದ್ದ ಗೂಡ್ಸ್ ಟೆಂಪೋ ರಿಕ್ಷಾ ಬಸ್ಸಿಗೆ ಢಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಅಪಘಾತದಿಂದ ಗೂಡ್ಸ್ ರಿಕ್ಷಾ ಚಾಲಕ ಹಾಗೂ ಸಹಸವಾರನಿಗೆ ತೀವ್ರ ಗಾಯಗಳಾಗಿದ್ದು ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. […]