ಶೀರೂರು ಮಠದ ಬಾಳೆ ಮುಹೂರ್ತ ಸಂಪನ್ನ

ಉಡುಪಿ: ಪ್ರಥಮ ಬಾರಿಗೆ ಉಡುಪಿ ಕೃಷ್ಣಮಠದ ಪರ್ಯಾಯ ಪೀಠ ಏರಲಿರುವ ಶೀರೂರು ಮಠಾಧೀಶರಾದ ವೇದವರ್ಧನತೀರ್ಥ ಸ್ವಾಮೀಜಿ ಶುಕ್ರವಾರ ಬಾಳೆ ಮುಹೂರ್ತ ನೆರವೇರಿಸಿದರು. ಪೂರ್ಣಪ್ರಜ್ಞ ಕಾಲೇಜು ಬಳಿಯಶೀರೂರು ಮಠದ ತೋಟದಲ್ಲಿ ಭಾವಿ ಪರ್ಯಾಯ ಪೀಠಾಧೀಶ ವೇದವರ್ಧನತೀರ್ಥ ಶ್ರೀಪಾದರು ವೇದವಾದ್ಯ ಘೋಷದ ನಡುವೆ ಬಾಳೆ ಸಸಿ‌ನೆಟ್ಟರು. ಜೊತೆಗೆ ತುಳಸಿ ಸಸಿ ಹಾಗೂ ಕಬ್ಬಿನ ಕಂದು ನೆಡಲಾಯಿತು. ವಿದ್ವಾನ್ ಗಿರಿರಾಜ ಉಪಾಧ್ಯಾಯ ಕಂಬ್ಳಕಟ್ಟ ಧಾರ್ಮಿಕ ವಿಧಿ ನೆರವೇರಿಸಿದರು. ಶೀರೂರು ಮಠದ ದಿವಾನ ಡಾ. ಉದಯ ಸರಳತ್ತಾಯ, ಶ್ರೀಮಠದ ಪಾರುಪತ್ಯಗಾರ ಶ್ರೀಶ ಭಟ್ […]