ನಾಡಿನ ವಿವಿಧೆಡೆ ಶಿರೂರು ಶ್ರೀಲಕ್ಷ್ಮೀವರ ತೀರ್ಥರ ಪುಣ್ಯ ಸಂಸ್ಮರಣೆ

ಉಡುಪಿ: ಶಿರೂರುಮಠದ ಲಕ್ಷ್ಮೀವರತೀರ್ಥ ಶ್ರೀಪಾದರ 2ನೇ ವರ್ಷದ ಪುಣ್ಯಸ್ಮರಣೆಯನ್ನು ನಾಡಿನ ವಿವಿಧ ಸ್ಥಳಗಳಲ್ಲಿ ಇಂದು ಆಚರಿಸಲಾಯಿತು. ದಕ್ಷಿಣಕನ್ನಡ ಜಿಲ್ಲೆಯ ಕೇಮಾರಿನಲ್ಲಿ ಸಾಂದಿಪಿನಿಮಠದ ಈಶವಿಠಲದಾಸ ಸ್ವಾಮೀಜಿಯವರು ತಮ್ಮ ಮಠದಲ್ಲಿ ಶ್ರೀವರದನಾರಾಯಣ, ಮೂಕಾಂಬಿಕಾ ಹಾಗೂ ಶಾಲಗ್ರಾಮ ಸನ್ನಿಧಿಗೆ ವಿಶೇಷ ಅಭಿಷೇಕ ಹಾಗೂ ಮಹಾಪೂಜೆ ಸಲ್ಲಿಸಿದರು. ನಂತರ ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನುಡಿನಮನ ಸಲ್ಲಿಸಲಾಯಿತು. ಕಿರಿ ಮಂಜೇಶ್ವರದ ಹೊಸಹಿತ್ಲು ಸಮುದ್ರ ಕಿನಾರೆಯಲ್ಲಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಉದಯ್ ಎಂ ಶ್ರೀಯಾನ್, ಕೋಶಾಧಿಕಾರಿ ವೆಂಕಟೇಶ ಪೂಜಾರಿ, ನಿಕಟಪೂರ್ವ ಅಧ್ಯಕ್ಷ […]