ಶಿರೂರು ಹೆದ್ದಾರಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಶಿರೂರು ಟೋಲ್ ಚಲೋ ಅಭಿಯಾನಕ್ಕೆ ಭಾರೀ ಸ್ಪಂದನೆ

ಶ್ರೀಕಾಂತ ಹೆಮ್ಮಾಡಿ, ಕುಂದಾಪುರ ಕುಂದಾಪುರ: ಶಿರೂರು ಹೆದ್ದಾರಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ಶಿರೂರು ಟೋಲ್ ಚಲೋ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಶಿರೂರು ಟೋಲ್ ಕೇಂದ್ರದಲ್ಲಿ ಸ್ಥಳೀಯರಿಗೆ ಶುಲ್ಕ ವಿನಾಯಿತಿ ನೀಡಬೇಕು, ಸರ್ವಿಸ್ ರಸ್ತೆ ಪೂರ್ಣಗೊಳಿಸಬೇಕು ಎಂಬ ಪ್ರಮುಖ ಆಗ್ರಹಗಳೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬುಧವಾದ ಬೆಳಿಗ್ಗೆ ಶಿರೂರು ಟೋಲ್ ಕೇಂದ್ರದ ಬಳಿ ಹೆದ್ದಾರಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಸ್ಥಳೀಯರು ಶಾಂತಿಯುತ ಪ್ರತಿಭಟನೆ ನಡೆಸಿ ರಾಷ್ಟ್ರೀಯ ಹೆದ್ದಾರಿ […]