ಶಿರೂರು, ಕಡ್ತಲದಲ್ಲಿ ಅಧಿಕಾರಿಗಳ ಗ್ರಾಮವಾಸ್ತವ್ಯ
ಉಡುಪಿ:ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಅಕ್ಟೋಬರ್ 15 ರಂದು ಬೆಳಗ್ಗೆ 11 ಗಂಟೆಗೆ ಉಡುಪಿ ತಾಲೂಕು ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿರೂರು ಗ್ರಾಮದ ಕಲ್ಲಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ನಡೆಸಲಿದ್ದು, ಶಿರೂರು ಗ್ರಾಮದ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮ ಕರಣಿಕರ ಕಚೇರಿಯಲ್ಲಿ ನೀಡಬಹುದಾಗಿದೆ. ಕಡ್ತಲ ಗ್ರಾಮದಲ್ಲಿ ಕಾರ್ಕಳ ತಹಶೀಲ್ದಾರರ ಗ್ರಾಮ ವಾಸ್ತವ್ಯ ಕಾರ್ಕಳ ತಾಲೂಕು ತಹಶೀಲ್ದಾರರು ಅಕ್ಟೋಬರ್ 15 ರಂದು ಬೆಳಗ್ಗೆ […]
ಜೀವ ಉಳಿಸಬೇಕಾದ ಆಂಬ್ಯುಲೆನ್ಸ್ ಜೀವ ತೆಗೆದಾಗ: ಶಿರೂರು ಟೋಲ್ ಬಳಿ ದಾರುಣ ಅಪಘಾತ; ಮೂವರ ಸ್ಥಿತಿ ಗಂಭೀರ ಓರ್ವ ಚಿಂತಾಜನಕ
ಉಡುಪಿ: ಜೀವ ಉಳಿಸಬೇಕಾಗಿರುವ ಆಂಬ್ಯುಲೆನ್ಸ್ ಜೀವ ತೆಗೆಯಲು ಕಾರಣವಾದಂತಹ ದಾರುಣ ಘಟನೆ ಶಿರೂರಿನಲ್ಲಿ ನಡೆದಿದೆ. ಅತೀ ವೇಗದಿಂದ ಬರುತ್ತಿದ್ದ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಹೊಡೆದಪ್ಪಳಿಸಿ, ಹೊಡೆದ ರಭಸಕ್ಕೆ ಆಂಬುಲೆನ್ಸ್ ಒಳಗಿದ್ದವರು ಹೊರಗೆ ಎಸೆಯಲ್ಪಟ್ಟಿದ್ದಾರೆ. ಇವರಲ್ಲಿ ಮೂವರು ಗಂಭೀರವಾಗಿ ಗಾಯಗೊಂಡರೆ ಮತ್ತು ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಆಂಬುಲೆನ್ಸ್ ಬರುತ್ತಿದುದ್ದನ್ನು ಕಂಡು ರಸ್ತೆಗಳವಡಿಸಿದ್ದ ಬ್ಯಾರಿಕೇಡ್ ತೆಗೆಯಲು ಧಾವಿಸಿದ ಟೋಲ್ ಗೇಟ್ […]